ADVERTISEMENT

ಕಲಬುರ್ಗಿ: ನಾಳೆ ಭಾರತ ಬಂದ್‌; ಬೆಂಬಲ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 4:51 IST
Last Updated 7 ಡಿಸೆಂಬರ್ 2020, 4:51 IST
ಭಾರತ್ ಬಂದ್
ಭಾರತ್ ಬಂದ್   

ಕಲಬುರ್ಗಿ: ಕೇಂದ್ರ ಸರ್ಕಾರ ವಿವಿಧ ಕಾಯ್ದೆಗಳ ತಿದ್ದುಪಡಿ ಮಾಡುವ ಮೂಲಕ ರೈತರು ಹಾಗೂ ಕಾರ್ಮಿಕ ವಿರೋಧ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಡಿ. 8ರಂದು ಕರೆ ನೀಡಿದ ರಾಷ್ಟ್ರಬಂದ್‌ಗೆ ಅಖಿಲ ಭಾರತ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ ಬೆಂಬಲ ಸೂಚಿಸಿದೆ.

ದೇಶದ ರೈತರನ್ನು ಒಕ್ಕಲೆಬ್ಬಿಸಲು ಬಿಜೆಪಿ, ಆರ್‌ಎಸ್‌ಎಸ್‌ ಕುತಂತ್ರ ನಡೆಸಿವೆ. ಕಾರ್ಪೊರೇಟ್‌ ಸಂಸ್ಥೆಗಳಿಗೆ ಅನುಕೂಲವಾಗುವಂತೆ ಕಾಯ್ದೆಗಳನ್ನು ತಿದ್ದಿಪಡಿ ಮಾಡಲಾಗಿದೆ. ಇದನ್ನು ವಿರೋಧಿಸಿ ದೇಶದಾದ್ಯಂತ ಲಕ್ಷಾಂತರ ರೈತರು ಹೋರಾಟಕ್ಕೆ ನಿಂತಿದ್ದಾರೆ. ಅವರನ್ನು ಬೆಂಬಲಿಸಲು ಸಕ್ರಿಯವಾಗಿ ಬಂದ್‌ನಲ್ಲಿ ಪಾಲ್ಗೊಳ್ಳುವುದಾಗಿ ಸಮಿತಿ ಮುಖಂಡರು ತಿಳಿಸಿದ್ದಾರೆ.

ಸಮಿತಿಯ ರಾಜ್ಯ ಘಟಕದ ಕಾರ್ಯದರ್ಶಿ ಯು.ಬಸವರಾಜ, ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಎಐಕೆಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಮೌಲಾ ಮುಲ್ಲಾ, ಆರ್‌ಕೆಎಸ್‌ ಕಾರ್ಯದರ್ಶಿ ಮಹೇಶ್‌ ಎಸ್‌.ಬಿ., ಜಗದೇವಿ ಹೆಗಡೆ ಇದ್ದರು.

ADVERTISEMENT

ವಿದ್ಯಾರ್ಥಿ ಸಂಘಟನೆಗಳ ಬೆಂಬಲ: ಡಿ. 8ರಂದು ಭಾರತ್ ಬಂದ್ ನಡೆಸಬೇಕು ಎಂಬ ರೈತರ ನಿರ್ಧಾರವನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಎಂದು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ರೈತರ ನ್ಯಾಯಸಮಮ್ಮ ಬೇಡಿಕೆಗಳಿಗೆ ನಮ್ಮ ಬೆಂಬಲವಿದೆ. ಈ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ವಾಮಮಾರ್ಗ ಅನುಸರಿಸಿ ರೈತರನ್ನು ಹಿಂಸೆ ಮಾಡುತ್ತಿದೆ. ರೈತರಿಗೆ ಅನ್ಯಾಯ ಆಗುವಂಥ, ಕಾರ್ಪೊರೇಟ್ ಸಂಸ್ಥೆಗಳನ್ನು ಸಾಕುವಂಥ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಇದ ಹೀಗೆ ಮುಂದುವರಿದರೆ ದೇಶವೇ ಬಂಡವಾಳಶಾಹಿಗಳ ಗುಲಾಮಗಿರಿಗೆ ಬೀಳುತ್ತದೆ. ಆದ್ದರಿಂದ ಬಂದ್‌ ಅನಿವಾರ್ಯ ಎಂದು ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತ ಎಸ್.ಎಚ್., ಕಾರ್ಯದರ್ಶಿ ಈರಣ್ಣ ಇಸಬಾ, ಎಸ್‌ಎ‍ಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಲಾರಿ ದೊಡ್ಡಮನಿ, ಸಿದ್ದಲಿಂಗ ಪಾಳ, ಕೆವಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರ ರಾಜೋಳ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.