ಕಲಬುರಗಿ: ಜೈ ಭಾರತಮಾತಾ ಸೇವಾ ಸಮಿತಿ ನವದೆಹಲಿ ಸಂಘಟನೆಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ನಿರಗುಡಿಯ ಹವಾ ಮಲ್ಲಿನಾಥ ಮಹಾರಾಜ ಅವರ ನೇತೃತ್ವದಲ್ಲಿ ಜನವರಿ 12ರಂದು ಬೆಳಿಗ್ಗೆ 11 ಗಂಟೆಗೆ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನ ಆಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಷ್ಟ್ರೀಯ ವಕ್ತಾರ ವೈಜನಾಥ ಝಳಕಿ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರವಿರುವ ಶರಣಬಸವೇಶ್ವರ ಸದಾಶಿವಯ್ಯ ವೀರಶೈವ ಅನ್ನಸತ್ತಂ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ಜನವರಿ 11ರಂದು ಆಳಂದ ತಾಲ್ಲೂಕಿನ ಲಾಡ ಚಿಂಚೋಳಿಯಲ್ಲಿರುವ ಭಾರತಮಾತಾ ದೇವಸ್ಥಾನದಿಂದ ಮೆರವಣಿಗೆ ನಡೆಯುತ್ತದೆ. ಬಳಿಕ ಶ್ರೀಶೈಲಕ್ಕೆ ತೆರಳಲಾಗುತ್ತದೆ. ಕರ್ನಾಟಕ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಿಂದ ಜನರು ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.
‘ರಾಷ್ಟ್ರನಾಯಕರನ್ನು ಒಂದು ಜಾತಿಗೆ ಸೀಮಿತ ಮಾಡದೆ ಅವರ ಜಯಂತಿ ಹಾಗೂ ಪುಣ್ಯಸ್ಮರಣೆಗಳನ್ನು ಸಮಿತಿಯು ಆಚರಿಸಿಕೊಂಡು ಬಂದಿದೆ’ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಸಾರವಾಡ, ಸಂದೇಶ ಪವಾರ, ದತ್ತು ಹಯ್ಯಾಳಕರ, ಸದಾಶಿವರಾವ ಭೋಸ್ಲೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.