ADVERTISEMENT

ತಹಶೀಲ್ದಾರ್ ಕೊಲೆ ಖಂಡಿಸಿ ಮೌನ ಪ್ರತಿಭಟನೆ 

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 14:38 IST
Last Updated 10 ಜುಲೈ 2020, 14:38 IST
ಚಂದ್ರಮೌಳೇಶ್ವರ ಅವರನ್ನು ಕೊಲೆ ಮಾಡಿರುವ ಘಟನೆ ಖಂಡಿಸಿ ಸರ್ಕಾರಿ ನೌಕರರ ಸಂಘದ ಸದಸ್ಯರು ತಹಶೀಲ್ದಾರ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು
ಚಂದ್ರಮೌಳೇಶ್ವರ ಅವರನ್ನು ಕೊಲೆ ಮಾಡಿರುವ ಘಟನೆ ಖಂಡಿಸಿ ಸರ್ಕಾರಿ ನೌಕರರ ಸಂಘದ ಸದಸ್ಯರು ತಹಶೀಲ್ದಾರ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು   

ಶಹಾಬಾದ್: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನಲ್ಲಿ ಭೂಮಿ ಸರ್ವೆ ಕಾರ್ಯಕ್ಕೆ ತೆರಳಿದ್ದ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಗುರುವಾರ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಖಂಡಿಸಿ ಶುಕ್ರವಾರ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದವರು ತಹಶೀಲ್ದಾರ್ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈರಣ್ಣ ಕೆಂಭಾವಿ ನೇತೃತ್ವದಲ್ಲಿ ವಿವಿಧ ಇಲಾಖೆಯ ಸರ್ಕಾರಿ ನೌಕರರು ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿಗಳು ಕೂಡಲೇ ಕೊಲೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಸರ್ಕಾರ ಕೂಡಲೇ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡುವ ಕಾನೂನು ರೂಪಿಸಬೇಕು. ಹತ್ಯೆಯಾದ ತಹಶೀಲ್ದಾರ್ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು ಹೇಳಿದರು.

ನಂತರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಉಪತಹಶೀಲ್ದಾರ್ ಮಲ್ಲಿಕಾರ್ಜುನ ರೆಡ್ಡಿ ಅವರ ಮುಖಾಂತರ ಮನವಿ ಪತ್ರ ಸಲ್ಲಿಸಿದರು.

ADVERTISEMENT

ಸಂಘದ ರಾಜ್ಯ ಪರಿಷತ್ ಸದಸ್ಯ ಶಶಿಕಾಂತ ಭರಣಿ, ಖಜಾಂಚಿ ರಮೇಶ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಸಂಜಯ್ ರಾಠೋಡ, ಏಮನಾಥ ರಾಠೋಡ, ಮೋಹನಕುಮಾರ ಗಾಯಕವಾಡ, ಶಿವಲಿಂಗಪ್ಪ ಹೆಬ್ಬಾಳಕರ್, ಪರಶುರಾಮ ಗುತ್ತಲ್, ಮಂಜುನಾಥ ಹಂದ್ರಾಳ, ಯೂಸುಫ್ ನಾಕೇದಾರ, ಎಚ್.ವೈ. ರಡ್ಡೇರ, ವಿಶಾಲ ಕುಲಕರ್ಣಿ, ಚನ್ನಬಸಪ್ಪ ಕೊಲ್ಲೂರ, ಶಾಂತಮಲ್ಲ ಶಿವಭೋ, ಗಣೇಶ ಜಾಯಿ, ಬಸವರಾಜ ಮದ್ರಿಕಿ, ಮರಲಿಂಗ ಯಾದಗಿರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.