ಚಿಂಚೋಳಿ: ‘ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದಿಂದ ಅಂದಾಜು ₹9.90 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ವಾಣಿಜ್ಯ ಮಳಿಗೆಯ ಕಟ್ಟಡ ಉದ್ಘಾಟನೆ ಸಮಾರಂಭವನ್ನು ಮೇ 15ರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ರಮೇಶ ಯಾಕಾಪುರ ತಿಳಿಸಿದ್ದಾರೆ.
ಟಿಎಪಿಸಿಎಂಎಸ್‌ನ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸಹಕಾರಿ ಮಾರುಕಟ್ಟೆ ಒಕ್ಕೂಟದ ಇಬ್ಬರು ನಿರ್ದೇಶಕರು ಅನುದಾನ ಮಂಜೂರು ಮಾಡಿದ್ದು, ಸಂಘದಿಂದ ₹2 ಲಕ್ಷ ಅನುದಾನ ಸೇರಿಸಿ ₹9.90 ಲಕ್ಷ ವೆಚ್ಚದಲ್ಲಿ ಎರಡು ವಾಣಿಜ್ಯ ಮಳಿಗೆಯ ಕಟ್ಟಡ ನಿರ್ಮಿಸಲಾಗಿದೆ ಎಂದರು.
ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕ ಅಮರೇಶ ಪಾಟೀಲ, ಸಂಜಯ ಪಾಟೀಲ, ಕಲಬುರಗಿ ಸಹಕಾರ ಸಂಘಗಳ ಉಪ ನಿಬಂಧಕ ಕಿಶೋರಕುಮಾರ ಪಾಟೀಲ, ಸೇಡಂ ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಲ್ಲಿಕಾರ್ಜುನ ಚಲವಾದಿ ಆಗಮಿಸಲಿದ್ದಾರೆ. ಸಂಘದ ನಿರ್ದೆಶಕರು ಹಾಗೂ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.