ಕಲಬುರ್ಗಿ: ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ, ಬಿ.ಪಿ.ಇಡಿ ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲೆ ಸಹಶಿಕ್ಷಕರ ಗ್ರೇಡ್–2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್–1 ಹುದ್ದೆಗೆ ಬಡ್ತಿ ನೀಡಲು 2018 ಹಾಗೂ 2019ರ ಬ್ಲಾಕ್ ಅವಧಿಯ ತಾತ್ಕಾಲಿಕ ಜೇಷ್ಠತಾ ಪಟ್ಟಿಗಳನ್ನು ಡಿಡಿಪಿಐ ಕಚೇರಿಯ ವೆಬ್‌ಸೈಟ್ ddpikalabaragi.in/seniority.aspx ಇದರಲ್ಲಿ ಪ್ರಕಟಿಸಲಾಗಿದೆ.
ಸಂಬಂಧಿಸಿದ ಶಿಕ್ಷಕರು ಈ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಗಮನಿಸಿ, ಏನಾದರೂ ಆಕ್ಷೇಪಗಳು ಇದ್ದಲ್ಲಿ ಮಾರ್ಚ್ 27ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಡಿಡಿಪಿಐ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.