ADVERTISEMENT

ಬ್ಯಾನರ್ ಹರಿದು ಅಂಬಿಗರ ಚೌಡಯ್ಯಗೆ ಅವಮಾನ: ಕೋಲಿ ಸಮಾಜದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2025, 6:22 IST
Last Updated 21 ಜನವರಿ 2025, 6:22 IST
<div class="paragraphs"><p>ಚಿತ್ತಾಪುರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಕೋಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.</p></div>

ಚಿತ್ತಾಪುರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಕೋಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.

   

ಚಿತ್ತಾಪುರ (ಕಲಬುರಗಿ ಜಿಲ್ಲೆ): ತಾಲ್ಲೂಕು ಆಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಗೆ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಹರಿದು, ಕಿತ್ತೊಯ್ದ ಘಟನೆಯನ್ನು ಖಂಡಿಸಿ ತಾಲ್ಲೂಕು ಕೋಲಿ ಸಮಾಜದ ಮುಖಂಡರು ತಹಶೀಲ್ದಾರ್ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದರು.

ಕೋಲಿ ಸಮಾಜದ ಹಿರಿಯ ಮುಖಂಡ ಭಿಮಣ್ಣ ಸಾಲಿ ಅವರ ನೇತೃತ್ವದಲ್ಲಿ ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣ ಹೆಗಲೇರಿ ಸೇರಿದಂತೆ ಅನೇಕ ಮುಖಂಡರು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಧರಣಿಗೆ ಕುಳಿತು ಘೋಷಣೆ ಕೂಗಿ ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದರು.

ADVERTISEMENT

ನಿಜಶರಣ ಅಂಬಿಗರ ಚೌಡಯ್ಯ ಹಾಗೂ ಮಾತೆ ಮಾಣಿಕೇಶ್ವರಿ ಅವರ ಭಾವಚಿತ್ರ ಹರಿದು ಅವಮಾನಿಸಿರುವ ದುಷ್ಕೃತ್ಯ ಅಕ್ಷಮ್ಯ ಅಪರಾಧವಾಗಿದೆ. ಸಮಾಜದ ಘನತೆ, ಗೌರವಕ್ಕೆ ಧಕ್ಕೆಯುಂಟಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಭಾವಚಿತ್ರ ಇದ್ದ ಬ್ಯಾನರ್ ಹರಿದು ಒಯ್ದಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೋಲಿ ಸಮಾಜದ ಗೌರವಾದ್ಯಕ್ಷ ರಾಮಲಿಂಗ ಬಾನರ್, ನಗರ ಘಟಕದ ಅಧ್ಯಕ್ಷ ಪ್ರಭು ಹಲಕರ್ಟಿ, ತಾಲ್ಲೂಕು ಯುವ ಘಟಕದ ಅಧ್ಯಕ್ಷ ರಾಜೇಶ ಹೋಳಿಕಟ್ಟಿ, ಮುಖಂಡರಾದ ಬಸವರಾಜ ಮೈನಾಳಕರ್, ಮಲ್ಲಿಕಾರ್ಜುನ ಎಮ್ಮೆನೋರ್, ಸುರೇಶ ಬೆನಕನಳ್ಳಿ, ಹಣಮಂತ ಸಂಕನೂರು, ಭೀಮಣ್ಣಾ ಹೋತಿನಮಡಿ, ದೇವಿಂದ್ರ ಅರಣಕಲ್, ಮುನಿಯಪ್ಪ ಕೊಳ್ಳಿ, ಕರಣಕುಮಾರ ಅಲ್ಲೂರ, ಭೀಮರಾಯ ಅಂಬಾರ, ಮಲ್ಲಿಕಾರ್ಜುನ ಸಂಗಾವಿ, ಸಾಬಣ್ಣಾ ಹೋಳಿಕಟ್ಟಿ, ತಿಮ್ಮಯ್ಯ, ಲಕ್ಷ್ಮಿಕಾಂತ ಸಾಲಿ, ಹಣಮಂತ ಕಟ್ಟಿ, ದತ್ತು ಮೈನಾಳಕರ್, ಶಿವಣ್ಣಾ ದೊಡ್ಡಮನಿ ಸೇರಿದಂತೆ ಹಲವರು ಭಾಗವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.