ಜೇವರ್ಗಿ: ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣದ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಕಟ್ಟಿಸಂಗಾವಿ ಹತ್ತಿರದ ಭೀಮಾನದಿ ಸೇತುವೆ ಹಾಗೂ ಪಟ್ಟಣದ ಬಸ್ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಯಿತು.
ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಹಾಗೂ ಸ್ಥಳೀಯ ಪೊಲೀಸ್ ಠಾಣೆ ಸಿಬ್ಬಂದಿ ಜಂಟಿಯಾಗಿ ಈ ಎರಡೂ ಸ್ಥಳಗಳಲ್ಲಿ ಪರಿಶೀಲನೆ ನಡೆಸಿತು. ಎಎಸ್ಐ ಮಂಜುನಾಥ, ಶಿವಶರಣ ಹಾಗೂ ತಂಡದವರಿಂದ ಜನಸಂದಣಿ ಇರುವ ಬಸ್ ನಿಲ್ದಾಣದಲ್ಲಿ ಎರಡು ಗಂಟೆಗೂ ಅಧಿಕ ಸಮಯದವರೆಗೆ ಪರಿಶೀಲನೆ ನಡೆಸಲಾಯಿತು. ನಂತರ ಭೀಮಾ ನದಿ ಸೇತುವೆಗೆ ತೆರಳಿ ಪರಿಶೀಲನೆ ನಡೆಸಿದರು. ಸಿಪಿಐ ರಾಜೇಸಾಬ ನದಾಫ್ ಹಾಗೂ ಪೊಲೀಸ್ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.