ಕಲಬುರಗಿ: ತ್ರೀಶಾ ಎಜುಕೇಶನ್ ಚಾರಿಟಬಲ್ ಮತ್ತು ವೆಲ್‌ಫೇರ್ ಟ್ರಸ್ಟ್ ವತಿಯಿಂದ ಬುದ್ಧ, ಬಸವ, ಅಂಬೇಡ್ಕರ್ ಜಯಂತ್ಯುತ್ಸವ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಸ್ಫೂರ್ತಿ ಚೇತನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ 15ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅನ್ನಪೂರ್ಣ ಕ್ರಾಸ್‌ನಲ್ಲಿರುವ ಕಲಾ ಮಂಡಳದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷೆ ಅಶ್ವಿನಿ ಚವ್ಹಾಣ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಚ್‌ಕೆಇ ಸೊಸೈಟಿ ನಿರ್ದೇಶಕ ಅರುಣಕುಮಾರ ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್ ಸುರೇಶ ಎಲ್.ಶರ್ಮಾ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಕುಮಾರ ರಾಠೋಡ, ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ನಿರ್ದೇಶಕ ಎಂ.ಎಸ್.ಅಲ್ಲಾಬಕಾಷ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ ಪ್ರಶಸ್ತಿ ಪ್ರದಾನ ಮಾಡುವರು’ ಎಂದರು.
ಬ್ರಹ್ಮವೇಣಿ ಪೋತೆ, ಸಂತೋಷ ಬಿರಾದಾರ, ಲಕ್ಷ್ಮಿ ಚವ್ಹಾಣ, ಪ್ರಿಯಾ ಗಡಾಳೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.