ಚಿತ್ತಾಪುರ (ಕಲಬುರಗಿ ಜಿಲ್ಲೆ): ಪಟ್ಟಣದಲ್ಲಿ ಮನೆ ಕಳ್ಳರ ಹಾವಳಿ ಶುರುವಾಗಿದ್ದು, ಎರಡು ಮನೆಗಳಲ್ಲಿ ಕಳ್ಳತನ ಹಾಗೂ ಮೂರು ಮನೆಗಳಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಆಶ್ರಯ ಬಡಾವಣೆಯ ಸೂರನದೇವಿ ದ್ಯಾವಪ್ಪ ಅವರ ಮನೆಯಲ್ಲಿನ 5 ಗ್ರಾಂ. ಚಿನ್ನ ಮತ್ತು ₹50 ಸಾವಿರ ನಗದು ಕಳುವಾಗಿದೆ. ಇದೇ ಬಡಾವಣೆಯ ಮೂರು ಮನೆಗಳಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ವೆಂಕಟೇಶ್ವರ ಬಡಾವಣೆಯ ಸಂಜಯಿನಿ ಶರಣಬಸಪ್ಪ ಅವರ ಮನೆಯಲ್ಲಿ 18 ಗ್ರಾಂ. ಬಂಗಾರ, 32 ತೊಲೆ ಬೆಳ್ಳಿ ಹಾಗೂ ₹42 ಸಾವಿರ ನಗದು ಕಳ್ಳರು ಕದ್ದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್ಐ ಶ್ರೀಶೈಲ್ ಅಂಬಾಟಿ ಅವರು ಸಿಬ್ಬಂದಿಯೊಂದಿಗೆ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.
ಐವರ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಪಟ್ಟಣದ ಗಣೇಶ ನಗರದಲ್ಲಿ ಶುಕ್ರವಾರ ಮಧ್ಯರಾತ್ರಿ 2.40ರ ಸುಮಾರಿಗೆ ಐವರು ಮುಖ ಮರೆಮಾಚಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯಗಳು ಮನೆಯೊಂದರ ಮುಂದೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಪೊಲೀಸರು ವಿಡಿಯೊ ಪರಿಶೀಲಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.