ಕಲಬುರ್ಗಿ: ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಅಭಿಯಾನದ ಅಂಗವಾಗಿ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಅಫಜಲಪುರ ಶಾಸಕ ಎಂ.ವೈ.ಪಾಟೀಲ ಅವರು ಕೋವಿಡ್ ಲಸಿಕೆ ಪಡೆದರು.
ಜಿ.ಪಂ. ಅಧ್ಯಕ್ಷೆ ಸುವರ್ಣಾ ಮಾಲಾಜಿ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಜಿ.ಪಂ. ಸಿಇಓ ಡಾ .ದಿಲೀಷ್ ಸಸಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜಶೇಖರ ಮಾಲಿ ಇದ್ದರು.
ದೇಶಾದ್ಯಂತ ಮತ್ತೊಂದು ಹಂತದ ಕೋವಿಡ್ ಲಸಿಕೆ ಅಭಿಯಾನ ನಡೆಯುತ್ತಿದ್ದು, ಸೋಮವಾರ ಪ್ರಧಾನಿ ನರೇಂದ್ರ ಮೋದಿ ಕೂಡ ಲಸಿಕೆ ಪಡೆದುಕೊಳ್ಳುವ ಮೂಲಕ ಜನತೆಗೆ ಲಸಿಕೆ ಪಡೆದುಕೊಳ್ಳಲು ಸ್ಫೂರ್ತಿ ತುಂಬಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.