ಜೇವರ್ಗಿ: ತಾಲ್ಲೂಕಿನ ರೇವನೂರ ಗ್ರಾಮದಲ್ಲಿ ಗುರುವಾರ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ. ಶ್ರೀನಾಥ ದತ್ತಪ್ಪ ಮೈನಾಳ(26) ಮೃತ ಯುವಕ.
ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬಿರುಗಾಳಿ ಸಹಿತ ಮಳೆ ಬೀಳಲು ಪ್ರಾರಂಭವಾಗಿದೆ. ಹೊಲದಿಂದ ಜಿಟಿಜಿಟಿ ಮಳೆಯಲ್ಲಿಯೇ ಮರಳಿ ಮನೆಗೆ ಬರುವಾಗ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.