ADVERTISEMENT

ಟಿಪ್ಪರ್‌ ಡಿಕ್ಕಿ: ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 7:49 IST
Last Updated 13 ಫೆಬ್ರುವರಿ 2026, 7:49 IST
<div class="paragraphs"><p>ಸಾವು (ಸಾಂದರ್ಭಿಕ ಚಿತ್ರ)</p></div>

ಸಾವು (ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ಕಲಬುರಗಿ: ನಗರದಲ್ಲಿ ಟಿಪ್ಪರ್‌ವೊಂದು ಹಿಂದಿನಿಂದ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ನಗರದ ರಿಂಗ್‌ ರಸ್ತೆಯ ಶಾಹ ಜಿಲಾನಿ ಕ್ರಾಸ್‌ನಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಡಬರಾಬಾದ್‌ ನಿವಾಸಿ ಸಚಿನ್‌ ಅಶೋಕ ಸಂಗಾವಿ (28) ಮೃತರು. 

ಸಚಿನ್‌ ಅವರು ಸಿಐಬಿ ಕಾಲೊನಿಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಮಧ್ಯಾಹ್ನ ಮಿರ್ಜಾ ನಗರದಿಂದ ಡಬರಾಬಾದ್‌ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಟಿಪ್ಪರ್‌ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ಮೂಲಗಳು ಹೇಳಿವೆ.

ಈ ಕುರಿತು ಕಲಬುರಗಿ ಸಂಚಾರ ಪೊಲೀಸ್‌ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ದಾಳಿಯಲ್ಲಿ ನಾಲ್ವರು ಆರೋಪಿಗಳು ಸಿಕ್ಕಿಬಿದ್ದಿದ್ದು, ಮೂವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಜೂಜಾಟದ ಸ್ಥಳದಲ್ಲಿ ಪಣಕ್ಕೆ ಹಚ್ಚಿದ್ದ ₹7 ಸಾವಿರ ಸೇರಿದಂತೆ ಒಟ್ಟು ₹20,980 ಜಪ್ತಿ ಮಾಡಿಕೊಂಡಿದ್ದಾರೆ.

ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.