
ಪ್ರಜಾವಾಣಿ ವಾರ್ತೆ
ಕಮಲಾಪುರ: ‘ವಿಧಾನ ಪರಿಷತ್ತ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹಾಗೂ ವಿಧಾನ ಪರಿಷತ್ತ ಸದಸ್ಯ ಎನ್.ರವಿಕುಮಾರ ಹೇಳಿಕೆ ಖಂಡಿಸಿ ಮೇ 31 ರಂದು ಬೆಳಿಗ್ಗೆ 11ಕ್ಕೆ ಕಲಬುರಗಿಯಲ್ಲಿ ಬ್ರಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಕಮಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈಜನಾಥ ತಡಕಲ್ ತಿಳಿಸಿದ್ದಾರೆ.
ಸಚಿವರಾದ ಪ್ರಿಯಾಂಕ್ ಖರ್ಗೆ ವಿರುದ್ಧ, ಮೆಲ್ಮನೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅಸಂವಿಧಾನ ಪದ ಬಳಸಿ ನಿಂದನೆ ಮಾಡಿದ್ದಾರೆ. ಜೊತೆಗೆ ವಿಧಾನ ಪರಿಷತ್ತ ಸದಸ್ಯ ಎನ್.ರವಿಕುಮಾರ್ ನಮ್ಮ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದವರು ಇರಬೇಕು ಎಂದು ಹೇಳಿ ಜಿಲ್ಲಾ ದಂಡಾಧಿಕಾರಿಗೆ ಅವಮಾನ ಮಾಡಿದ್ದಾರೆ. ಇವರಿಬ್ಬರ ಹೇಳಿಕೆ ಖಂಡಿಸಿ ಕಲಬುರಗಿ ನಾಗರಿಕ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.