ADVERTISEMENT

ಯಡಿಯೂರಪ್ಪ ವಿರುದ್ಧದ ಎಫ್‌ಐಆರ್ ರದ್ದಿನ ಅರ್ಜಿ ವಿಚಾರಣೆ ಆರಂಭ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2019, 10:21 IST
Last Updated 20 ಫೆಬ್ರುವರಿ 2019, 10:21 IST
   

ಕಲಬುರ್ಗಿ: ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಬುಧವಾರ ಇಲ್ಲಿ ಆರಂಭವಾಗಿದೆ.

ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠದ ನಾಲ್ಕನೇ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಯಡಿಯೂರಪ್ಪ ಪರ ವಕೀಲ ಸಿ.ವಿ.ನಾಗೇಶ್ ಅವರು ವಾದ ಮಂಡಿಸುತ್ತಿದ್ದಾರೆ.

ಆಪರೇಷನ್ ಕಮಲ ಆಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಸೇರಿದಂತೆ ನಾಲ್ಕು ಜನರ ವಿರುದ್ಧ ರಾಯಚೂರು ಜಿಲ್ಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್‌ಐಆರ್ ಹಾಕಿದ್ದರು.

ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಫೆ.13ರಂದು ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ. ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ, ಹಾಸನ ಶಾಸಕ ಪ್ರೀತಂಗೌಡ ಹಾಗೂ ಪತ್ರಕರ್ತ ಎಂ.ಬಿ.ಮರಮಕಲ್‌ ಅವರನ್ನು ನಂತರದ ಆರೋಪಿಗಳನ್ನಾಗಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.