ಕಾಳಗಿ (ಕಲಬುರ್ಗಿ ಜಿಲ್ಲೆ): ಸಮೀಪದ ಕರೆಕಲ್ ತಾಂಡಾದ ಬಳಿ ರಸ್ತೆ ಬದಿಗೆ ಗುರುವಾರ ಟಮ್ ಟಮ್ ಪಲ್ಟಿ ಹೊಡೆದು 29 ಕೂಲಿ ಮಹಿಳೆಯರು ಗಾಯಗೊಂಡಿದ್ದಾರೆ.
ತಾಂಡಾದ ಹೊಲಕ್ಕೆ ಹೋಗಿ ಹೆಸರು ಕಾಯಿ ಬಿಡಿಸಿ ಮನೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಈ ಎಲ್ಲರೂ ಕಾಳಗಿ ಪಟ್ಟಣದವರಾಗಿದ್ದು 29 ಕೂಲಿ ಮಹಿಳೆಯರು ಒಂದೇ ಟಮ್ ಟಮ್ ನಲ್ಲಿ ಹಿಂದಿರುಗುತ್ತಿದ್ದರು ಎನ್ನಲಾಗಿದೆ.
ಟಮ್ ಟಮ್ ಸುಂಠಾಣ ಗ್ರಾಮದಾಗಿದ್ದು ಚಾಲಕ ಪರಾರಿಯಾಗಿದ್ದಾನೆ.
ಗಾಯಾಳುಗಳಿಗೆ ಚಿಕಿತ್ಸೆಗಾಗಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಈ ಪೈಕಿ ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನು ಕಲ್ಬುರ್ಗಿ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಘವೇಂದ್ರ ಗುತ್ತೇದಾರ ತಿಳಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.