ಚಿತ್ತಾಪುರ (ಕಲಬುರಗಿ ಜಿಲ್ಲೆ): ಪಟ್ಟಣದ ಹೊರವಲಯದ ಜಮೀನಿನಲ್ಲಿ ಗುರುವಾರ ಕುರಿ ಮೇಯಿಸಲು ಹೋಗಿದ್ದ ಇಬ್ಬರು ಬಾಲಕರು ತೆರೆದ ಬಾವಿಯಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ.
ಕುಶಾಲ್ ಚೆನ್ನಪ್ಪ (8), ರಾಜಕುಮಾರ ಲಕ್ಷ್ಮಣ (15) ಮೃತ ಬಾಲಕರು.
ಸುದ್ದಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್–2 ತಹಶೀಲ್ದಾರ್ ರಾಜಕುಮಾರ ಮರತೂರಕರ್ ಹಾಗೂ ಪಿಎಸ್ಐ ಶ್ರೀಶೈಲ್ ಅಂಬಾಟಿ ಸ್ಥಳಕ್ಕೆ ಬಂದು ಪರಿಶೀಲಿಸಿದರು. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬಂದು ಬಾಲಕರ ಶವವನ್ತು ಹೊರಗೆ ತೆಗೆದಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಮೃತ ಬಾಲಕರ ಕುಟುಂಬಕ್ಕೆ ಸಿ.ಎಂ.ಆರ್.ಎಫ್ ನಿಧಿಯಡಿ ಪರಿಹಾರ ಒದಗಿಸಲು ಠಾಣೆಯಲ್ಲಿ ದಾಖಲಾದ ಪ್ರಕರಣದ ವಿವರ ಹಾಗೂ ಶವ ಪರೀಕ್ಷೆ ವರದಿಯೊಂದಿಗೆ ಶೀಘ್ರ ವರದಿ ಸಲ್ಲಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ’ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.