ADVERTISEMENT

ಖಾಸಗಿ ಬಸ್ ಉರುಳಿ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 18:33 IST
Last Updated 1 ಜೂನ್ 2022, 18:33 IST

ಕಲಬುರಗಿ: ಅಫಜಲಪುರ ತಾಲ್ಲೂಕಿನ ಕಣ್ಣಿ ಗ್ರಾಮದ ಹೊರವಲಯದಲ್ಲಿ ಬುಧವಾರ ಸಂಜೆ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಇಬ್ಬರು ಮೃತ
ಪಟ್ಟಿದ್ದು, 28ಕ್ಕೂ ಹೆಚ್ಚು ಜನರು ಗಾಯ
ಗೊಂಡಿದ್ದಾರೆ. ಹಾವನೂರು ಗ್ರಾಮದ ಸಿದ್ದಮ್ಮ (60), ಶಿವಕುಮಾರ (38) ಮೃತಪಟ್ಟವರು.

ಗಾಯಾಳುಗಳನ್ನು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರೆಲ್ಲರೂ ಹಾವನೂರ ಗ್ರಾಮದವರು. ಕಲಬುರಗಿಯಲ್ಲಿ ಮದುವೆಯಲ್ಲಿ ಭಾಗವಹಿಸಿ ಮರಳುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಬಿದ್ದಿದ್ದರಿಂದ ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಕಲಬುರಗಿ ಸಂಚಾರ ಠಾಣೆ 1ರಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT