ADVERTISEMENT

ಹಿಜಾಬ್ ಧರಿಸಿದ್ದವರಿಗೆ ಪರೀಕ್ಷೆ ಬರೆಯಲು ಅವಕಾಶ: ಇಬ್ಬರು ಶಿಕ್ಷಕರ ಅಮಾನತು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 10:42 IST
Last Updated 31 ಮಾರ್ಚ್ 2022, 10:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರಗಿ: ಮಾ 28ರಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದ ಆರೋಪದ ಮೇರೆಗೆ ಜೇವರ್ಗಿ ತಾಲ್ಲೂಕಿನ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಜೇವರ್ಗಿ ತಾಲ್ಲೂಕಿನ ಇಜೇರಿಯ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆದ ಬಗ್ಗೆ ಶ್ರೀರಾಮಸೇನೆಯ ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ ನಿಂಗಣ್ಣಗೌಡ ಮಾಲಿಪಾಟೀಲ ಡಿಡಿಪಿಐ ಅವರಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಪರೀಕ್ಷೆಯ ಅಧೀಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.

ಅಧೀಕ್ಷಕರ ವರದಿ ಆಧರಿಸಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಆಲೂರು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಹಯಾದ್ ಬಾಗವಾನ ಅವರನ್ನು ಡಿಡಿಪಿಐ ಅಶೋಕ ಭಜಂತ್ರಿ ಹಾಗೂ ಕೊಡಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಂಜುನಾಥ್ ಅವರನ್ನು ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.