ಅಫಜಲಪುರ: ಮಹಾರಾಷ್ಟ್ರ ಹಾಗೂ ಭೀಮಾ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗಿದ್ದು, ಉಜನಿ ಜಲಾಶಯದಿಂದ 61,6000 ಕ್ಯೂಸೆಕ್ ನೀರು ಭೀಮಾ ನದಿಗೆ ಬಿಡಲಾಗಿದೆ.
‘ಮುನ್ನೆಚ್ಚರಿಕೆ ಕ್ರಮವಾಗಿ ಸೊನ್ನ ಭೀಮಾ ಬ್ಯಾರೇಜ್ ಗೇಟ್‌ಗಳ ಮೂಲಕ ಭೀಮಾ ನದಿಗೆ 15,000 ಕ್ಯೂಸೆಕ್ ನೀರು ಬಿಡಲಾಗುತ್ತಿದೆ’ ಎಂದು ಭೀಮಾ ಏತ ನೀರಾವರಿ ಉಪ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸಂತೋಷಕುಮಾರ್ ಸಜ್ಜನ್, ತಹಶೀಲ್ದಾರ್ ಸಂಜುಕುಮಾರ್ ದಾಸರ್ ತಿಳಿಸಿದ್ದಾರೆ. ಭೀಮಾ ನದಿಯ ಸೊನ್ನ ಬ್ಯಾರೇಜ್ 3 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಈಗಾಗಲೇ ಡ್ಯಾಂನಲ್ಲಿ 2 ಟಿಎಂಸಿ ನೀರು ಸಂಗ್ರಹವಾಗಿದೆ. ಮಹಾ ರಾಷ್ಟ್ರದ ಉಜನಿ ಜಲಾಶಯದಿಂದ ಇನ್ನೂ ಹೆಚ್ಚಿನ ನೀರು ಭೀಮಾ ನದಿಗೆ ಬಿಡುವ ಸಂಭವವಿದ್ದು, ಜನರು ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.