ADVERTISEMENT

ಕಲಬುರಗಿ |ಯುಪಿಎಸ್‌ಸಿ ಪ್ರಿಲಿಮಿನರಿಗೆ ಬಿಎ ಪರೀಕ್ಷೆ ಅಡ್ಡಿ

​ಪ್ರಜಾವಾಣಿ ವಾರ್ತೆ
Published 25 ಮೇ 2023, 7:14 IST
Last Updated 25 ಮೇ 2023, 7:14 IST
ಯುಪಿಎಸ್‌ಸಿ ಪರೀಕ್ಷೆ (ಪ್ರಾತಿನಿಧಿಕ ಚಿತ್ರ)
ಯುಪಿಎಸ್‌ಸಿ ಪರೀಕ್ಷೆ (ಪ್ರಾತಿನಿಧಿಕ ಚಿತ್ರ)   

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಎಡವಟ್ಟಿನಿಂದಾಗಿ ಬಿಎ ಐದನೇ ಸೆಮಿಸ್ಟರ್ (ರೆಗ್ಯುಲರ್ ಮತ್ತು ರಿಪೀಟರ್‌) ವಿದ್ಯಾರ್ಥಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ. ವಿಶ್ವವಿದ್ಯಾಲಯವು ಮೇ 28ರಂದು ನಿಗದಿಪಡಿಸಿದ ಪರೀಕ್ಷೆಯ ದಿನದಂದೆ ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್‌ಸಿ) ಪ್ರಿಲಿಮಿನರಿ ಪರೀಕ್ಷೆ ನಡೆಯಲಿದೆ.

ಗುಲಬರ್ಗಾ ವಿಶ್ವವಿದ್ಯಾಲಯದ ಸಂಯೋಜಿತ ವಿವಿಧ ಪದವಿ ಕಾಲೇಜುಗಳ ಪ್ರಾಂಶುಪಾಲರು ವಿಶ್ವವಿದ್ಯಾಲಯದ ಪರೀಕ್ಷೆಯನ್ನು ಮುಂದೂಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮನವಿ ಮಾಡಿದ್ದಾರೆ.

‘ಗುಲಬರ್ಗಾ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ. ಪರೀಕ್ಷೆಯನ್ನು ಮರು ನಿಗದಿಪಡಿಸುವಂತೆ ಕುಲಪತಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ವಿಶ್ವವಿದ್ಯಾಲಯದ ಸರ್ವಾಧಿಕಾರಿ ಧೋರಣೆಯು ಯುವಕರ ಭವಿಷ್ಯವನ್ನು ಹಾಳು ಮಾಡುತ್ತಿದೆ’ ಎಂದು ಹೆಸರು ಹೇಳಲು ಇಚ್ಛಿಸದ ಕಾಲೇಜುಗಳ ಪ್ರಾಂಶುಪಾಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ಕರ್ನಾಟಕ ಇತಿಹಾಸ ಮತ್ತು ಆಧುನಿಕ ಯುರೋಪ್ ಇತಿಹಾಸ ಮತ್ತು ಐಚ್ಛಿಕ ವಿಷಯಗಳ (ಆಯ್ಕೆ ಆಧಾರಿತ ಕ್ರೆಡಿಟ್ ಸಿಸ್ಟಮ್) 5ನೇ ಸೆಮಿಸ್ಟರ್ ಬಿಎ ಪರೀಕ್ಷೆಯು ಭಾನುವಾರದಂದು ನಡೆಯಲಿವೆ. ಇದೇ ದಿನ ವರ್ಷದ ಹಿಂದೆಯೇ ನಿಗದಿಯಾಗಿದ್ದ ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆ ನಡೆಯಲಿದೆ. ಕೊನೆಯ ಸೆಮಿಸ್ಟರ್‌ನ ವಿದ್ಯಾರ್ಥಿಗಳು ಎರಡರಲ್ಲಿ ಒಂದು ಪರೀಕ್ಷೆಯನ್ನು ಆಯ್ದುಕೊಳ್ಳುವ ಗೊಂದಲದಲ್ಲಿ ಸಿಲುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.