ADVERTISEMENT

ಕಲಬುರಗಿಯಲ್ಲಿ ಮಕ್ಕಳ ಲಸಿಕಾಕರಣ: ಸಚಿವ ನಿರಾಣಿ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 7:32 IST
Last Updated 3 ಜನವರಿ 2022, 7:32 IST
   

ಕಲಬುರಗಿ: ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಲಸಿಕಾಕರಣ ಕಾರ್ಯಕ್ರಮಕ್ಕೆ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ಅವರು, ಇಲ್ಲಿನ ಆದರ್ಶ ನಗರದ ಆದರ್ಶ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಚಾಲನೆ ನೀಡಿದರು.

ಸಂಸದ ಡಾ.ಉಮೇಶ್ ಜಾಧವ, ಶಾಸಕ ಬಸವರಾಜ ಮುತ್ತಿಮಡು, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಶಿಲ್ ನಮೋಶಿ, ಕರ್ನಾಟಕ ನವೀಕರಿಸಬಹುದಾದ ಇಂಧನ ನಿಯಮಿತದ ಅಧ್ಯಕ್ಷ ಚಂದು ಪಾಟೀಲ,
ಪ್ರಭಾರಿ ಜಿಲ್ಲಾಧಿಕಾರಿ ಡಾ.ದಿಲೀಶ್ ಶಶಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

60ಕ್ಕೂ ಹೆಚ್ಚು ಮಕ್ಕಳು ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.