ಕಲಬುರಗಿ: ಇಲ್ಲಿನ ಬೀರ್‌ದೇವ್ ಫೈನಾನ್ಸ್ ಪ್ರೈವೆಟ್ ಲಿಮಿಟೆಡ್‌ನ ನಿರ್ದೇಶಕಿ ನಂದಿನಿ ರಘೋಜಿ ಅವರಿಗೆ ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ರಾಜ್ಯ ಮಟ್ಟದ ವಾಸವಿ ಎಕ್ಸಲೆನ್ಸ್ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಬೆಂಗಳೂರಿನ ಟೌನ್‌ಹಾಲ್ ಸಭಾಂಗಣದಲ್ಲಿ ಈಚೆಗೆ ಜರುಗಿದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ನಂದಿನಿ ಅವರ ಶೈಕ್ಷಣಿಕ ಸಾಧನೆ, ಕುಟುಂಬದ ಉದ್ದಿಮೆಗಳಲ್ಲಿ ಆಶಾದಾಯಕ ಬೆಳವಣಿಗೆ, ಶಿಕ್ಷಣ ಕ್ಷೇತ್ರದ ಸೇವೆ, ಸಮಾಜ ಸೇವೆ ಹಾಗೂ ಕೆಕೆಸಿಸಿಐನ ಮಹಿಳಾ ಉದ್ಯಮಶೀಲತೆ ಕ್ರಿಯಾಶೀಲ ಸದಸ್ಯೆಯಾಗಿ ನೀಡುತ್ತಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
ಈ ವೇಳೆ ಮಹಾಸಭಾದ ಅಧ್ಯಕ್ಷ ಆರ್.ಪಿ.ರವಿಶಂಕರ, ಹಿರಿಯ ಉಪಾಧ್ಯಕ್ಷರಾದ ಕುಂಟನಾಳ ವೆಂಕಟೇಶ, ರಾಮಚಂದ್ರ ಡಿ.ರಘೋಜಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾಸಭಾದ ಸಂಘಟನಾ ಕಾರ್ಯದರ್ಶಿ ಆರ್.ರವಿಕುಮಾರ, ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕೆ.ಆರ್.ಕೃಷ್ಣಾ, ನಿರ್ದೇಶಕ ವೀರೇಶ ವಾಘಣಗೇರಿ, ಎನ್.ಎಸ್. ಶ್ರೀನಿವಾಸಮೂರ್ತಿ, ಸುಧಾ ಆರ್.ಪಿ., ರವಿಶಂಕರ ಸೇರಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.