ADVERTISEMENT

ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್‌ನಿಂದ ಸಾವು

​ಪ್ರಜಾವಾಣಿ ವಾರ್ತೆ
Published 13 ಮೇ 2021, 7:49 IST
Last Updated 13 ಮೇ 2021, 7:49 IST
   

ಕಲಬುರ್ಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರ್ಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಅವರು ಗುರುವಾರ ಕೋವಿಡ್‌ನಿಂದನಗರದ ‌ಖಾಸಗಿ ಅಸ್ಪತ್ರೆಯಲ್ಲಿ ಮೃತಪಟ್ಟರು.

ವಾರದ ಹಿಂದೆ ಸೋಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.

ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾ ಇತ್ತೀಚೆಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.

ADVERTISEMENT

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಜಯತೀರ್ಥ ಅವರ ತಂದೆ ವೆಂಕಟರಾವ್ ಕಾಗಲಕರ್ ಅವರೂ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.