ADVERTISEMENT

ಉಪ ಚುನಾವಣೆಯಲ್ಲಿ ಗೆಲುವು ನಮ್ಮದೇ: ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2019, 8:35 IST
Last Updated 25 ಏಪ್ರಿಲ್ 2019, 8:35 IST
   

ಬೆಂಗಳೂರು:ಉಪ ಚುನಾವಣೆಯಲ್ಲಿ ಜನ ಖಂಡಿತ ನಮಗೆ ಬೆಂಬಲ ಕೊಡುತ್ತಾರೆ. ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಯಲ್ಲಿ ನಮ್ಮ ಪಕ್ಷವೇ ಗೆಲ್ಲಲಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಚಿಂಚೋಳಿ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕುರಿತುಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು,ಉಮೇಶ ಜಾಧವ ಯಾಕೆ ಪಕ್ಷ ಬಿಟ್ಟು ಹೋದರು ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಾಮಾಣಿಕ ಆಡಳಿತ ಕೊಡುತ್ತೀವಿ ಅನ್ನೋ ಮೋದಿ ಇದರ ಬಗ್ಗೆ ಏನಂತಾರೆ ಎಂದು ಪ್ರಶ್ನಿಸಿದರು.

ರಮೇಶ ಜಾರಕಿಹೊಳಿ ಅಸಮಾಧಾನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಾಯಕರ ಜೊತೆ ರಮೇಶ ಜಾರಕಿಹೊಳಿ ಮಾತುಕತೆ ನಡೆಸಲು ಈಗಲೂ ಅವಕಾಶಗಳಿವೆ.‌ ಅವರು ಮೊದಲು ಪಕ್ಷದ ಮುಖಂಡರ ಜೊತೆ ಕುಳಿತು ಮಾತನಾಡಲಿ. ಉಪಚುನಾವಣೆ ಮೇಲೆ ಇವೆಲ್ಲ ಪರಿಣಾಮ ಬೀರುವುದಿಲ್ಲ ಎಂದರು.

ADVERTISEMENT

ಬಜೆಟ್ ಅಧಿವೇಶನ ನಡೆಯುವ ವೇಳೆ ಆಪರೇಷನ್ ಕಮಲ ಬಗ್ಗೆಯೇ ಚರ್ಚೆ ಆಗಿದೆ. ಬಿಜೆಪಿಯವರು ಮತ್ತೆ ಇನ್ನೊಂದು ಡೆಡ್ ಲೈನ್ ಕೊಟ್ಟಿದಾರೆ ಅಷ್ಟೇ. ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ ಎಂದೂ ಹೇಳಿದರು.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಚಿವ ಪ್ರಿಯಾಂಕ್ ಖರ್ಗೆ, ಪಿ.ಟಿ. ಪರಮೇಶ್ವರ್ ನಾಯಕ್, ಶಾಸಕರಾದ ಅಜಯ್ ಸಿಂಗ್, ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ವಿಜಯ್ ಸಿಂಗ್, ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ್ ಗುತ್ತೇದಾರ್ ಮತ್ತು ಕೆಪಿಸಿಸಿ ಉಪಾಧ್ಯಕ್ಷರಾದ ವಿ. ಆರ್ ಸುದರ್ಶನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.