ADVERTISEMENT

ವಾಂತಿ ಭೇದಿ; ಗರ್ಭಿಣಿ ಸಾವು, 60 ಜನ ಅಸ್ವಸ್ಥ

ಅಲ್ಲೂರ್ (ಬಿ): ಮಕ್ಕಳು, ವೃದ್ಧರ ನರಳಾಟ; ವೈದ್ಯರ ತಂಡ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2020, 20:15 IST
Last Updated 20 ಫೆಬ್ರುವರಿ 2020, 20:15 IST
   

ಚಿತ್ತಾಪುರ (ಕಲಬುರ್ಗಿ ಜಿಲ್ಲೆ):ತಾಲ್ಲೂಕಿನ ಅಲ್ಲೂರ್(ಬಿ) ಗ್ರಾಮದಲ್ಲಿ 60ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ.

‘ಸಕಾಲಕ್ಕೆ ಚಿಕಿತ್ಸೆ ಕೊಡಿಸದ ಕಾರಣಸುಜಾತಾ ಭೀಮರಾಯ ಎಂಬ ಎಂಟು ತಿಂಗಳ ಗರ್ಭಿಣಿ ಫೆ.15 ರಂದು ಮೃತಪಟ್ಟಿದ್ದಾರೆ. ವಾಂತಿ ಭೇದಿಯಿಂದ ಬಳಲುತ್ತಿದ್ದಾಗ ಚಿಕಿತ್ಸೆ ಕೊಡಿಸದೇ ಮನೆಯವರು ದೇವರು–ನಿಂಬೆಹಣ್ಣಿನ ಮೊರೆ ಹೋಗಿದ್ದಾರೆ. ದೇಹದಲ್ಲಿನ ನೀರಿನಂಶ ಕಡಿಮೆಯಾಗಿ ಮೃತಪಟ್ಟಿದ್ದಾರೆ’ ಎಂದು ಅಲ್ಲೂರ್ (ಕೆ) ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

‘ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿತ್ಯ ವೈದ್ಯರು ಬರುವುದಿಲ್ಲ. ಸಿಬ್ಬಂದಿ ಸರಿಯಾಗಿ ಚಿಕಿತ್ಸೆ ನೀಡುವುದಿಲ್ಲ. ಹೀಗಾಗಿ ಜನರು ಈ ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕೆಲವರು ಚಿತ್ತಾಪುರಕ್ಕೆ ತೆರಳಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ’ ಎಂದು ಗ್ರಾಮಸ್ಥ ಬಸವರಾಜ ತಳವಾರ ಹೇಳಿದರು.

ADVERTISEMENT

‘ಗ್ರಾಮದ ಕುಡಿಯುವ ನೀರಿನ ಮೂಲಗಳು ಕಲುಷಿತಗೊಂಡಿವೆ. ಆ ನೀರು ಕುಡಿದ ಜನರಿಗೆ ವಾಂತಿ ಭೇದಿ ಹರಡಿದೆ. ಗ್ರಾಮದಲ್ಲಿ ನೈರ್ಮಲ್ಯ ಹದಗೆಟ್ಟಿದೆ’ ಎಂದು ಆರೋಗ್ಯ ಇಲಾಖೆಯ ಜಿಲ್ಲಾ ಕಾಲರಾ ಘಟಕದ ಉಪ ವ್ಯೆದ್ಯಾಧಿಕಾರಿ ಡಾ. ಶರಣಬಸಪ್ಪ ಎಸ್.ಗಣಜಲಖೇಡ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.