ADVERTISEMENT

ಕಲಬುರ್ಗಿ: ಬಸವರಾಜ ಗಾದಗೆಗೆ ‘ಬೆಸ್ಟ್ ಅಡ್ಮಿನಿಸ್ಟ್ರೇಟರ್’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 7:47 IST
Last Updated 7 ಅಕ್ಟೋಬರ್ 2021, 7:47 IST
ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರ್ಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪ್ರೊ. ಬಸವರಾಜ ಗಾದಗೆ ಅವರಿಗೆ ಬೆಸ್ಟ್ ಅಡ್ಮಿನಿಸ್ಟ್ರೇಟರ್ ಪ್ರಶಸ್ತಿ ಪ್ರದಾನ ಮಾಡಲಾಯಿತು
ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರ್ಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪ್ರೊ. ಬಸವರಾಜ ಗಾದಗೆ ಅವರಿಗೆ ಬೆಸ್ಟ್ ಅಡ್ಮಿನಿಸ್ಟ್ರೇಟರ್ ಪ್ರಶಸ್ತಿ ಪ್ರದಾನ ಮಾಡಲಾಯಿತು   

ಕಲಬುರ್ಗಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರ್ಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪ್ರೊ. ಬಸವರಾಜ ಗಾದಗೆ ಅವರು ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆ (ಐಎಸ್‍ಟಿಇ) ನೀಡುವ ಬೆಸ್ಟ್ ಅಡ್ಮಿನಿಸ್ಟ್ರೇಟರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮುಂಬೈನಲ್ಲಿ ಮಂಗಳವಾರ ನಡೆದ ಐಎಸ್‍ಟಿಇ 50ನೇ ರಾಷ್ಟ್ರೀಯ ವಾರ್ಷಿಕ ಸಮ್ಮೇಳನದಲ್ಲಿ ಪ್ರೊ. ಬಸವರಾಜ ಗಾದಗೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೀದರ್‌ನ ಗಾದಗೆ ಅವರು ಆರು ವರ್ಷಗಳಿಂದ ವಿಟಿಯು ಕಲಬುರ್ಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಭಾಗದ ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.

ADVERTISEMENT

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ತಾಂತ್ರಿಕ ಶಿಕ್ಷಣ ಸಚಿವ ಉದಯ ಸಾಮಂತ್, ಐಎಸ್‍ಟಿಇ ಅಧ್ಯಕ್ಷ ಪ್ರತಾಪಸಿಂಹ ದೇಸಾಯಿ, ಪಂಜಾಬ್ ತಾಂತ್ರಿಕ ವಿ.ವಿ ಕುಲಪತಿ ಬೂಟಾಸಿಂಗ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.