
ಪ್ರಜಾವಾಣಿ ವಾರ್ತೆ
ವಾಡಿ: ‘ಅನ್ಯಜಾತಿಯ ಹುಡುಗನ ಜತೆ ಮದುವೆಯಾಗಿದ್ದಕ್ಕೆ ಸ್ವಂತ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಕಠಿಣ ಶಿಕ್ಷೆ ವಿಧಿಸಬೇಕು ಮತ್ತು ಮರ್ಯಾದಾ ಹತ್ಯೆ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು’ ಎಂದು ಕರ್ನಾಟಕ ಪ್ರಾಂತ ಮಹಿಳಾ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಹ ಸಂಚಾಲಕಿ ಶೇಖಮ್ಮ ಕುರಿ ಒತ್ತಾಯಿಸಿದ್ದಾರೆ.
‘ಹುಬ್ಬಳ್ಳಿಯಲ್ಲಿ ಈಚೆಗೆ ಜರುಗಿದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು ದಲಿತ ಯುವಕನ ಜತೆ ಮದುವೆಯಾಗಿರುವ ಸಂಗತಿಯನ್ನು ಮನಸ್ಸಲ್ಲಿ ಇಟ್ಟುಕೊಂಡು ಮಗಳನ್ನೇ ಕೊಂದದ್ದು ಅತ್ಯಂತ ಆಘಾತಕಾರಿ ಘಟನೆ. ಹತ್ಯೆ ಮಾಡಿದ ಆರೋಪಿಯನ್ನು ಕೇವಲ ಬಂಧಿಸಿದರೆ ಸಾಲದು ಅವನಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.