ADVERTISEMENT

ಸೊನ್ನ ಭೀಮಾ ಬ್ಯಾರೇಜ್‍ನಿಂದ 1 ಲಕ್ಷ ಕ್ಯುಸೆಕ್‌ ನೀರು ನದಿಗೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2019, 14:09 IST
Last Updated 28 ಸೆಪ್ಟೆಂಬರ್ 2019, 14:09 IST
ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದ ಹತ್ತಿರ ಭೀಮಾ ನದಿಗೆ ನಿರ್ಮಿಸಿರುವ ಬ್ಯಾರೇಜ್ ಕಮ್ ಬ್ರಿಜ್ ಸಿಂದಗಿ ತಾಲ್ಲೂಕಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಿದ್ದರಿಂದ ಸಂಪರ್ಕ ಸ್ಥಗಿತವಾಗಿದೆ
ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದ ಹತ್ತಿರ ಭೀಮಾ ನದಿಗೆ ನಿರ್ಮಿಸಿರುವ ಬ್ಯಾರೇಜ್ ಕಮ್ ಬ್ರಿಜ್ ಸಿಂದಗಿ ತಾಲ್ಲೂಕಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಿದ್ದರಿಂದ ಸಂಪರ್ಕ ಸ್ಥಗಿತವಾಗಿದೆ   

ಅಫಜಲಪುರ: ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್‍ನಿಂದ 1 ಲಕ್ಷ ಕ್ಯುಸೆಕ್ ನೀರನ್ನು ಶನಿವಾರ ನದಿಗೆ ಬಿಡಲಾಗಿದೆ ಎಂದು ಭೀಮಾ ಏತ ನೀರಾವರಿ ಉಪ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮಲ್ಲಿಕಾರ್ಜುನ ಜಾಕಾ ತಿಳಿಸಿದರು.

ಭೀಮಾ ನದಿಗೆ ನೀರು ಬಿಟ್ಟಿರುವ ಬಗ್ಗೆ ಮಾಹಿತಿ ನೀಡಿದ ಅವರು, ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಶನಿವಾರ 1 ಲಕ್ಷ ಕ್ಯುಸೆಕ್‌ ನೀರು ಬಿಡಲಾಗಿದ್ದು, ಅಷ್ಟೇ ಪ್ರಮಾಣದಲ್ಲಿ 8 ಗೇಟ್ ಮುಖಾಂತರ ನದಿಗೆ ನೀರು ಬಿಡಲಾಗುತ್ತದೆ. ಅದಕ್ಕಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ತಾಲ್ಲೂಕಿನ ಘತ್ತರಗಿ ಗ್ರಾಮದ ಹತ್ತಿರ ಭೀಮಾ ನದಿಗೆ ನಿರ್ಮಿಸಿರುವ ಬ್ಯಾರೇಜ್ ಕಮ್ ಬ್ರಿಜ್ ಸಿಂದಗಿ ತಾಲ್ಲೂಕಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಿದ್ದರಿಂದ ಸಂಪರ್ಕ ಸ್ಥಗಿತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.