ADVERTISEMENT

ಇಂದು- ನಾಳೆಯಿಂದ ನೀರು ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 4:12 IST
Last Updated 17 ಫೆಬ್ರುವರಿ 2021, 4:12 IST

ಕಲಬುರ್ಗಿ: ನಗರಕ್ಕೆ ನೀರು ಸರಬರಾಜು ಮಾಡುವ ಸರಡಗಿಯ ಜಾಕ್‌ವೆಲ್‌ನಲ್ಲಿ ತುರ್ತು ದುರಸ್ತಿ ಕೈಗೊಳ್ಳಬೇಕಾದ ಕಾರಣ ಫೆ. 17 ಹಾಗೂ 18ರಂದು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಜಾಕ್‌ವೆಲ್‌ನ ಪಂಪ್‌ಸೆಟ್‌ ಮ್ಯಾನಿಫೋಲ್ಡರ್‌ನಲ್ಲಿ ನೀರು ಸೋರಿಕೆ ಆಗುತ್ತಿದ್ದು,ಬುಧವಾರ ಮಧ್ಯಾಹ್ನ 3ಕ್ಕೆ ಇದರ ದುರಸ್ತಿ ಕಾರ್ಯ ಆರಂಭಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT