ADVERTISEMENT

ಭೀಮಾ ನದಿಗೆ ಸೊನ್ನ ಬ್ಯಾರೇಜಿನಿಂದ 2.23 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 4:11 IST
Last Updated 15 ಅಕ್ಟೋಬರ್ 2020, 4:11 IST
ಸೊನ್ನ ಬ್ಯಾರೇಜ್‌ನಿಂದ ಭೀಮಾ ನದಿಗೆ ನೀರು ಹರಿಸಲಾಗಿದೆ
ಸೊನ್ನ ಬ್ಯಾರೇಜ್‌ನಿಂದ ಭೀಮಾ ನದಿಗೆ ನೀರು ಹರಿಸಲಾಗಿದೆ   

ಕಲಬುರ್ಗಿ: ಭೀಮಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಭೀಮಾ ನದಿಗೆ ಬಿಟ್ಟಿರುವುದರಿಂದ ಸೊನ್ನ ಬ್ಯಾರೇಜಿಗೆ 1,98,000 ಕ್ಯುಸೆಕ್ ನೀರು ಒಳ ಹರಿವಾಗಿ ಬರುತ್ತಿದೆ.

ಗುರುವಾರ ಬೆಳಿಗ್ಗೆ 8ಕ್ಕೆ ಸೊನ್ನ ಬ್ಯಾರೇಜಿನಿಂದ ಭೀಮಾ ನದಿಗೆ 2,23,000 ಕ್ಯುಸೆಕ್ ನೀರು ಹರಿಬಿಡಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ವೃತ್ತದ ಅಧೀಕ್ಷಕ ಎಂಜಿನಿಯರ್ ಜಗನ್ನಾಥ ಹಲಿಂಗೆ ತಿಳಿಸಿದ್ದಾರೆ.

ಹೀಗಾಗಿ ಬ್ಯಾರೇಜಿನ ಕೆಳ ಪಾತ್ರದಲ್ಲಿ ಬರುವ ಅಫಜಲಪುರ, ಚಿತ್ತಾಪುರ, ಜೇವರ್ಗಿ ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ನದಿ ಪಾತ್ರದ ಜನರು ನದಿ ದಂಡೆಗೆ ಹೋಗಬಾರದು ಮತ್ತು ತಮ್ಮ ಜಾನುವಾರಗಳೊಂದಿಗೆ ಸುರಕ್ಷತಾ ಕ್ರಮದೊಂದಿಗೆ ಎಚ್ಚರಿಕೆಯಿಂದಿರುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.