ADVERTISEMENT

ಕಮಲಾಪುರ | ‘ಪ್ರಗತಿ ಪಥದತ್ತ ಕಲ್ಯಾಣ ಕರ್ನಾಟಕ’

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 14:09 IST
Last Updated 17 ಸೆಪ್ಟೆಂಬರ್ 2024, 14:09 IST
ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಸಮಾರಂಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು
ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಸಮಾರಂಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು   

ಕಮಲಾಪುರ: 371 (ಜೆ) ವಿಶೇಷ ಸ್ಥಾನಮಾನದಿಂದಾಗಿ ಸರ್ಕಾರದಿಂದ ಅಪಾರ ಪ್ರಮಾಣದ ಅನುದಾನ ಸಿಗುತ್ತಿದ್ದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ತಹಶೀಲ್ದಾರ್ ಮೋಸಿನ್‌ ಅಹಮ್ಮದ್‌ ತಿಳಿಸಿದರು.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ತ ತಹಶೀಲ್ದಾರ್ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಶೈಕ್ಷಣಿಕ ಸಂಸ್ಥೆ, ವಿಶ್ವವಿದ್ಯಾಲಯಗಳು, ಕಿದ್ವಾಯಿ, ಜಯದೇವ ಮತ್ತಿತರ ಹೆಸರಾಂತ ಆರೋಗ್ಯ ಸಂಸ್ಥೆಗಳು ಕಲಬುರಗಿಯಲ್ಲಿ ಸ್ಥಾಪನೆಯಾಗಿವೆ. ಶೈಕ್ಷಣಿಕ ಆರೋಗ್ಯ ದೃಷ್ಟಿಯಿಂದ ಈ ಭಾಗದ ಜನರಿಗೆ ಅತ್ಯಮೂಲ್ಯ ಸೇವೆ ಒದಗಿಸುತ್ತಿವೆ ಎಂದರು.

ADVERTISEMENT

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಾಂತಪ್ಪ ಹಾದಿಮನಿ, ಗ್ರೇಡ್ 2 ತಹಶೀಲ್ದಾರ ಶಿವಕುಮಾರ ಶಾಬಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರ ಓಕಳಿ, ದೀಪಕ ಶೆಟ್ಟಿ, ಕಮಲಾಕರ, ರಘುನಂದನ ದ್ಯಾಮಣಿ, ಯಲ್ಲಪ್ಪ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.