ADVERTISEMENT

ಕಾಡುಹಂದಿ ದಾಳಿ: ಇಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2022, 8:46 IST
Last Updated 13 ಫೆಬ್ರುವರಿ 2022, 8:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ವನ್ಯಜೀವಿ ಧಾಮ ವ್ಯಾಪ್ತಿಯ ಚಿಕ್ಕಲಿಂಗದಳ್ಳಿಯಲ್ಲಿ ಭಾನುವಾರ, ಕಾಡುಹಂದಿ ದಾಳಿಯಿಂದ ಇಬ್ಬರು ಗಾಯಗೊಂಡಿದ್ದಾರೆ.

ಅಂತಪ್ಪ ಚಂದ್ರಪ್ಪ ಹಾಗೂ ಶಶಿಕುಮಾರ ಗಾಯಗೊಂಡವರು. ಇಬ್ಬರನ್ನೂ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಇಬ್ಬರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಂದಿ ದಾಳಿ ಮಾಡಿದೆ.

ADVERTISEMENT

ಅಂತಪ್ಪ ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಶಶಿಕುಮಾರಗೆ ಚಿಕ್ಕಪುಟ್ಟ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಹಾಣ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.