ADVERTISEMENT

ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಧಾನಿಯೊಂದಿಗೆ ಚರ್ಚೆ: ಸಿಎಂ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 6:29 IST
Last Updated 17 ಸೆಪ್ಟೆಂಬರ್ 2020, 6:29 IST
ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಕಲಬುರ್ಗಿ: ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲು ದೆಹಲಿಗೆ ತೆರಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು‌.

ವಿಶೇಷ ವಿಮಾನದ ‌ಮೂಲಕ ದೆಹಲಿಗೆ ತೆರಳುವುದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ನಡೆಯುವ ನಿರೀಕ್ಷೆಯನ್ನು ‌ನಾನೂ ಇಟ್ಟುಕೊಂಡಿದ್ದೇನೆ ಎಂದರು.

ADVERTISEMENT

ಕಲ್ಯಾಣ ‌ಕರ್ನಾಟಕ ಅಭಿವೃದ್ಧಿ ‌ಮಂಡಳಿಗೆ ಅಗತ್ಯ ಅನುದಾನ ನೀಡುವ ಆಸೆ ಇದೆ. ಆದರೆ ಕೋವಿಡ್ ಇರುವುದರಿಂದ ಹೆಚ್ಚು ಅನುದಾನ ನೀಡಲು ‌ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.