
ಕಲಬುರಗಿ: ‘ಮದ್ಯ ಕುಡಿಯಲು ಹಣಕ್ಕಾಗಿ ಪೀಡಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಲ್ಲದೇ ಜೀವಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ನೊಂದ ಮಹಿಳೆಯೊಬ್ಬರು ಪತಿ ವಿರುದ್ಧ ದೂರು ನೀಡಿದ್ದಾರೆ.
ನಗರದ ತಿಲಕ್‌ನಗರ ನಿವಾಸಿ ಶರಣಮ್ಮ ಪಾಟೀಲ ನೊಂದು ದೂರು ನೀಡಿದವರು. ಶರಣಮ್ಮ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದಾರೆ.
‘ನನ್ನ ಪತಿ ಕುಡಿತದ ಚಟಕ್ಕೆ ಬಿದ್ದು ಎಲ್ಲ ಕಡೆ ಸಾಲ ಮಾಡಿಕೊಂಡಿದ್ದಾರೆ. ಅದನ್ನು ತೀರಿಸಲು ಹಣಕ್ಕಾಗಿ ಪೀಡಿಸುತ್ತಾರೆ. ಮಾನಸಿಕ ಕಿರುಕುಳ ದೈಹಿಕ ಹಲ್ಲೆ ನಡೆಸಿದ್ದಾರೆ. 2025ರ ಡಿಸೆಂಬರ್ 25ರಂದು ನನ್ನೊಂದಿಗೆ ಜಗಳಾಡಿ ಮನೆ ಬಿಟ್ಟು ಹೋಗಿದ್ದರು. ಇದೇ ಜನವರಿ 28ರಂದು ಮನೆಗೆ ಬಂದು ಮತ್ತೆ ಹಲ್ಲೆ ನಡೆಸಿದ್ದಾರೆ. ಜೀವಬೆದರಿಕೆ ಹಾಕಿದ್ದು, ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ದೂರಿನಲ್ಲಿ ಶರಣಮ್ಮ ತಿಳಿಸಿದ್ದಾರೆ.
ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.