ಜೇವರ್ಗಿ: ತಾಲ್ಲೂಕಿನ ಗುಡೂರ ಎಸ್.ಎ ಗ್ರಾಮದಲ್ಲಿ ಮಳೆಯಿಂದ ಮನೆಯ ಚಾವಣಿ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಶುಕ್ರವಾರ ಮೃತಪಟ್ಟಿದ್ದಾಳೆ.
ಭಾಗಮ್ಮ ಸಿದ್ದರಾಮ ಹವಾಲ್ದಾರ್ (55) ಮೃತ ಮಹಿಳೆ.
ಜೂನ್ 16ರಂದು ಮಳೆಗೆ ಮನೆಯ ಮಣ್ಣಿನ ಚಾವಣಿ ಬಿದ್ದು ಮಹಿಳೆಯ ಮೊಮ್ಮಗ ಚಂದ್ರಶೇಖರ ಹವಾಲ್ದಾರ್ (11) ಮೃತಪಟ್ಟಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಭಾಗಮ್ಮಳಿಗೆ ಜೇವರ್ಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಭಾಗಮ್ಮ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.