ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಮಹಿಳೆ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ಒಂದು ಮಗುವನ್ನು ರಕ್ಷಿಸಲಾಗಿದೆ.
ಘಟನೆಯಲ್ಲಿ ತಾಯಿ ಲಕ್ಷ್ಮಿ ಏಳಕೆ (28), ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತಪಟ್ಟಿದ್ದಾರೆ.
ಬಾವಿಯಲ್ಲಿ ಮುಳುಗುತ್ತಿದ್ದ ಈಶ್ವರಿ (4)ಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಮೂವರೂ ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಮನೆಯವರು ಲಕ್ಷ್ಮಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಗ್ರಾಮದ ಹೊರವಲಯದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.