ಕಲಬುರ್ಗಿ: ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್‌ಗೆಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲೇ ಖಾಸಗಿ ಆಂಬುಲೆನ್ಸ್ ಚಾಲಕನಿಂದ ಅತ್ಯಾಚಾರ ಯತ್ನಕ್ಕೊಳಗಾಗಿದ್ದ 25 ವರ್ಷದ ಮಹಿಳೆ ಬುಧವಾರ ಸಾವಿಗೀಡಾಗಿದ್ದಾರೆ.
ಜೂನ್ 8ರಂದು ರಾತ್ರಿ ಆಂಬುಲೆನ್ಸ್ ಚಾಲಕ, ನಗರದ ಫಿಲ್ಟರ್ ಬೆಡ್ ನಿವಾಸಿ ಪ್ರೇಮಕುಮಾರ ಅಲಿಯಾಸ್ ಪಿಂಟು (25) ಅತ್ಯಾಚಾರಕ್ಕೆ ಯತ್ನಿಸಿದ್ದ. ಇದರಿಂದ ಎಚ್ಚರಗೊಂಡ ಮಹಿಳೆ ಜೋರಾಗಿ ಕೂಗಿಕೊಂಡಿದ್ದರಿಂದ ಸುತ್ತಮುತ್ತಲಿನ ಬೆಡ್‌ಗಳಲ್ಲಿದ್ದ ರೋಗಿಗಳು ಹಾಗೂ ಸಿಬ್ಬಂದಿ ಹಿಡಿಯಲು ಯತ್ನಿ
ಸಿದ್ದರು. ಆಗ ತಪ್ಪಿಸಿಕೊಂಡಿದ್ದ. ಬ್ರಹ್ಮ
ಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಭದ್ರತಾ ಲೋಪ: ‘ಬೌನ್ಸರ್‌ಗಳ ಕಾವಲು ಇಲ್ಲಿನ ಜಿಮ್ಸ್ ಆಸ್ಪತ್ರೆಗೆ ಇದೆ. ಬೌನ್ಸರ್‌ಗಳ ಬದಲು ಪೊಲೀಸರು ಅಥವಾ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂಬ ಒತ್ತಾಯ ಕೇಳಿಬಂದರೂ ಆಡಳಿತ ಮಂಡಳಿ ಅವರ ಸೇವೆ ರದ್ದುಗೊಳಿಸಿಲ್ಲ. ಇಷ್ಟೆಲ್ಲ ನಡೆದರೂ ಹಿರಿಯ ಅಧಿಕಾರಿಗಳು ಏಕೆ ಸುಮ್ಮನಿದ್ದಾರೆ’ ಎಂದು ದಲಿತ ಮಾದಿಗ ಸಮನ್ವಯ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ ತಾರಫೈಲ್ ಪ್ರಶ್ನಿಸಿದರು.
ಮಾಹಿತಿ ಪಡೆಯಲು ಜಿಮ್ಸ್ ನಿರ್ದೇಶಕಿ ಡಾ. ಕವಿತಾ ಪಾಟೀಲ ಅವರನ್ನು ಹಲವು ಬಾರಿ ‘ಪ್ರಜಾವಾಣಿ’ ಸಂಪರ್ಕಿಸಿದರೂ ಅವರು ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.