ಅಫಜಲಪುರ: ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮಂಗಳವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಗ್ರಾಮೀಣ ಭಾಗದಲ್ಲಿ ಮರಗಳಿಗೆ ಹಾಗೂ ದೇವಸ್ಥಾನಗಳಲ್ಲಿ ಜೋಕಾಲಿ ಕಟ್ಟಿ ಹಿರಿಯರು ಕಿರಿಯರು ಭೇದವಿಲ್ಲದೆ ಜೋಕಾಲಿ ಆಡಿ ಸಂಭ್ರಮಿಸಿದರು. ಮನೆಯಲ್ಲಿ ಹೋಳಿಗೆ, ಕಡಬು ಮಾಡಿ ದೇವರಿಗೆ ನೈವೇದ್ಯ ಅರ್ಪಿಸಿದರು. ನಾಗರಕಲ್ಲಿಗೆ, ಹುತ್ತಗಳಿಗೆ ಮಹಿಳೆಯರು ಹಾಲೆರೆದು ಪೂಜೆ ಸಲ್ಲಿಸಿದರು.
ಹಳ್ಳಿಗಳಲ್ಲಿ ಯುವಕರು ಕಬ್ಬಡ್ಡಿ, ಕಲ್ಲು ಎಸೆಯುವುದು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಗುರಿ ಮುಟ್ಟುವುದು ಹೀಗೆ ಹಲವಾರು ಆಟಗಳನ್ನು ಆಡಿ ಸಂಭ್ರಮಿಸಿದರು. ಬಳ್ಳೂರ್ಗಿ ಗ್ರಾಮದಲ್ಲಿ ಗೆಳೆಯರ ಬಳಗದಿಂದ ಕಬ್ಬಡ್ಡಿ ಆಟ ಏರ್ಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.