ಕಮಲಾಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ನಾಗೂರ ಸಮೀಪದ ಕನ್ನಡಗಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ರಸ್ತೆ ಬದಿಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಭಾನುವಾರ ಮಹಿಳೆಯ ಶವ ಪತ್ತೆಯಾಗಿದು, ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ ನಗರದ ಜಗತ್ ಬಡಾವಣೆ ನಿವಾಸಿ ಬಸಮ್ಮ (40) ಶವವಾಗಿ ಪತ್ತೆಯಾದವರು. ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಆರೋಪಿಗಳು ಸಾಕ್ಷಿ ನಾಶಕ್ಕಾಗಿ ಶವವನ್ನು ಸುಟ್ಟು ಹಾಕಲು ಯತ್ನಿಸಿದ್ದು ಅರ್ಧ ದೇಹ ಸುಟ್ಟಿದೆ. ಆರೋಪಿಗಳ ಪತ್ತೆಗೆ ಪೊಲೀಸರ ತನಿಖೆ ನಡೆಸುತ್ತಿದ್ದಾರೆ.
ಈ ಕುರಿತು ಮಹಾಗಾಂವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಕಮಲಾಪುರ ಸಿಪಿಐ ವಿ.ನಾರಾಯಣ, ಮಹಾಗಾಂವ ಪಿಎಸ್‌ಐ ಆಶಾ ರಾಠೋಡ, ಕಮಲಾಪುರ ಪಿಎಸ್ಐ ಸಂಗೀತಾ ಸಿಂಧೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.