ADVERTISEMENT

‘ಜನಪರ ಕೆಲಸಗಳು ಸಹಿಸಲು ಆಗುತ್ತಿಲ್ಲ’: ಜಗದೇವ ಗುತ್ತೇದಾರ

​ಪ್ರಜಾವಾಣಿ ವಾರ್ತೆ
Published 24 ಮೇ 2025, 16:29 IST
Last Updated 24 ಮೇ 2025, 16:29 IST
ಜಗದೇವ ಗುತ್ತೇದಾರ
ಜಗದೇವ ಗುತ್ತೇದಾರ   

ಕಲಬುರಗಿ: ಬಿಜೆಪಿ ನಾಯಕರು ಅನಗತ್ಯವಾಗಿ ಕಲಬುರಗಿ ಚಲೋ ಪ್ರತಿಭಟನೆ ನಡೆಸುವ ಮೂಲಕ ಜಿಲ್ಲೆಯ ಜನತೆಗೆ ತೊಂದರೆ ನೀಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಹೇಳಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದರು. ಚಿತ್ತಾಪುರದಲ್ಲಿ ಪ್ರಿಯಾಂಕ್ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ಷೇಪಕ್ಕೆ ನಾರಾಯಣಸ್ವಾಮಿ ಅವರೂ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದರು. ಇದೊಂದು ಮುಗಿದ ವಿಷಯವಾಗಿತ್ತು. ಆದರೆ, ಬಿಜೆಪಿಗರು ಅದನ್ನು ಮತ್ತೆ ಮುಂದುವರಿಸಿ ಪ್ರತಿಭಟನೆ ನಡೆಸುವ ಮುಖೇನ ಜನರಿಗೆ ತೊಂದರೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಿಯಾಂಕ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿಗರು ಸೋಫಿಯಾ ಖುರೇಷಿ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದ ಬಿಜೆಪಿ ಸಚಿವರು ರಾಜೀನಾಮೆ ನೀಡಿದ್ದಾರೆಯೇ? ಪ್ರಿಯಾಂಕ್ ಅವರ ಅಭಿವೃದ್ಧಿ, ಜನಪರ ಕೆಲಸಗಳನ್ನು ಸಹಿಸಲಾರದೆ ರಾಜೀನಾಮೆ ಕೇಳುತ್ತಿದ್ದಾರೆ ಎಂದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.