ADVERTISEMENT

ಕಲಬುರಗಿ: ವಿಶ್ವ ಮಲೇರಿಯಾ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 16:18 IST
Last Updated 28 ಏಪ್ರಿಲ್ 2025, 16:18 IST
ಕಲಬುರಗಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ವಿಶ್ವ ಮಲೇರಿಯಾ ದಿನ ಆಚರಿಸಲಾಯಿತು
ಕಲಬುರಗಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ವಿಶ್ವ ಮಲೇರಿಯಾ ದಿನ ಆಚರಿಸಲಾಯಿತು   

ಕಲಬುರಗಿ: ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ವಿಶ್ವ ಮಲೇರಿಯಾ ದಿನ ಆಚರಿಸಲಾಯಿತು.

ಈ ವೇಳೆ ಭಿತ್ತಿ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಡಿಎಚ್‌ಒ ಶರಣಬಸಪ್ಪ ಕ್ಯಾತನಾಳ, ಮಲೇರಿಯಾ ರೋಗಾಣು ಹೊಂದಿದ ಅನಾಫಿಲಸ್ ಸೊಳ್ಳೆ ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ ಮಲೇರಿಯಾ ಜೀವಿಯಿಂದ ಮನುಷ್ಯರಲ್ಲಿ ಚಳಿ ಜ್ವರ ಆರಂಭವಾಗುತ್ತದೆ. ಹೀಗೆ ಮಲೇರಿಯಾ ರೋಗವು ಒಬ್ಬರಿಂದೊಬ್ಬರಿಗೆ ಹರಡಲು ಕಾರಣವಾಗುತ್ತದೆ. ನಗರ ಮತ್ತು ತಾಲ್ಲೂಕಿನಾದಂತ್ಯ ಮಲೇರಿಯಾ ವಿರುದ್ದದ ಹೋರಾಟ ತೀವ್ರಗೋಳಿಸುವ ಜತೆಗೆ ನಿಯಂತ್ರಣದ ಸಂಕಲ್ಪ ಅಗತ್ಯ ಎಂದು ಹೇಳಿದರು.

ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ.ವಿವೇಕಾನಂದ ರೆಡ್ಡಿ, ಜಿಲ್ಲಾ ಡಿವಿಬಿಡಿಸಿ ಅಧಿಕಾರಿ ಡಾ. ಬಸವರಾಜ ಗುಳಗಿ, ಜಿಲ್ಲಾ ಕೀಟಶಾಸ್ತ್ರಜ್ಞ ಚಾಮರಾಜ ದೊಡ್ಡಮನಿ, ಜಿಲ್ಲಾ ವಿಬಿಡಿಸಿ ಸಮಾಲೋಚಕ ಕಾರ್ಣಿಕ ಕೋರೆ, ವಿಬಿಡಿಸಿ ಘಟಕದ ಅಧಿಕಾರಿ ಶರಣಬಸಪ್ಪ ಬಿರಾದಾರ, ಜಿಲ್ಲಾ ಪ್ರಯೋಗಶಾಲಾ ತಂತ್ರಜ್ಞ  ಚಂದ್ರಕಾಂತ ಏರಿ, ಕಿರಿಯ ಅರೋಗ್ಯ ನಿರೀಕ್ಷಣಾಧಿಕಾರಿ ಚಂದು ಬೈರಾನ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.