ADVERTISEMENT

ಕಲಬುರ್ಗಿ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಸ್ವಚ್ಛತಾ ಪಕ್ವಾಡಾ ಕಾರ್ಯಕಮ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 5:21 IST
Last Updated 26 ಸೆಪ್ಟೆಂಬರ್ 2021, 5:21 IST

ಕಲಬುರ್ಗಿ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಸೆ.27ರಂದು ಬೆಳಿಗ್ಗೆ 10.30ಕ್ಕೆ ಕಮಲಾಪುರ ತಾಲ್ಲೂಕಿನ ಹೊಳಕುಂದಾ ಗ್ರಾಮದಲ್ಲಿ 'ಸ್ವಚ್ಛತಾ ಪಕ್ವಾಡಾ' ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಪ್ರವಾಸೋದ್ಯಮ ಇಲಾಖೆ, ತಹಶೀಲ್ದಾರ್ ಕಚೇರಿ ಹಾಗೂ ಇನ್ ಟ್ಯಾಕ್ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಪ್ರವಾಸೋದ್ಯಮ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಆನಂದ ಸಿಂಗ್ ಉದ್ಘಾಟಿಸುವರು.

ಶಾಸಕ ಬಸವರಾಜ ಮತ್ತಿಮೂಡ ಅವರ ಅಧ್ಯಕ್ಷತೆ ವಹಿಸುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,
ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕರಾದ ಡಾ.ಅಜಯ ಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ, ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ಸಂಸದ ಡಾ.ಉಮೇಶ ಜಾಧದ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.

ADVERTISEMENT

ವಿಶೇಷ ಆಹ್ವಾನಿತರಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ - ಮಂಡಳಿಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.