ಕಲಬುರಗಿ: ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಪಾಟೀಲ ಅವರಿಗೆ ಸಲ್ಲಿಸಿದ್ದಾರೆ.
ಬಿಜೆಪಿ ಚಿತ್ತಾಪುರ ಕ್ಷೇತ್ರದಿಂದ ರೌಡಿ ಶೀಟರ್ ಮಣಿಕಂಠ ರಾಠೋಡಗೆ ಟಿಕೆಟ್ ನೀಡಿತ್ತು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ವಿಶ್ವನಾಥ ಪಾಟೀಲ ಅವರು ಈಗಾಗಲೇ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಅರವಿಂದ ಚವ್ಹಾಣಗೆ ನೀಡಬೇಕು ಎಂದು ಮನವಿ ಮಾಡಿದ್ದರು.
ಆದರೆ, ಹೈಕಮಾಂಡ್ ನಿರ್ಧಾರ ಬದಲಿಸಿರಲಿಲ್ಲ. ಹೀಗಾಗಿ ಪಕ್ಷದ ನಿಲುವಿನಿಂದ ಬೇಸತ್ತು ರಾಜೀನಾಮೆ ನೀಡಿದ್ದಾರೆ.
ವಿಶ್ವನಾಥ ಪಾಟೀಲ ಹೆಬ್ಬಾಳ ಅವರು ಶೀಘ್ರವೇ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
ಚಿತ್ತಾಪುರ ಕ್ಷೇತ್ರದ ಅಭಿವೃದ್ಧಿಗಾಗಿ ತಾಲ್ಲೂಕಿನ ಮೊಮ್ಮಗನಾದ ನಾನು ಪಣ ತೊಟ್ಟಿದ್ದೇನೆ. ನನಗೆ ಕೈಜೋಡಿಸುವಂತೆ ಇನ್ನೂ ಮೌಲ್ಯ ಉಳಿಸಿಕೊಂಡ ಬಿಜೆಪಿಯಲ್ಲಿರುವ ಹಿರಿಯರಿಗೆ ಮನವಿ ಮಾಡಿದ್ದೇನೆ. ನಾನು ಒಂದು ಹೆಜ್ಜೆ ಮುಂದೆ ಇಟ್ಟಿದ್ದೇನೆ. ಅವರೂ ಮುಂದೆ ಬರಬೇಕು ಎಂದು ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.