ADVERTISEMENT

ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ಸ್ಥಿರ: ಸಾಲಿಮಠ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 3:42 IST
Last Updated 26 ಜನವರಿ 2022, 3:42 IST
ವಾಡಿ ಸಮೀಪದ ರಾವೂರ ಗ್ರಾಮದ ಶ್ರೀ ಸಿದ್ಧಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ರಾವೂರ ಪ್ರಾಥಮಿಕ ಆರೋಗ್ಯ ಕೇಂದ್ರ ಭಾರತ ಸ್ವಾಭಿಮಾನ ಟ್ರಸ್ಟ್ ಹಾಗೂ ಪತಾಂಜಲಿ ಯೋಗ ಪೀಠದ ವತಿಯಿಂದ ಯೋಗ ದಿನ ಆಚರಿಸಲಾಯಿತು
ವಾಡಿ ಸಮೀಪದ ರಾವೂರ ಗ್ರಾಮದ ಶ್ರೀ ಸಿದ್ಧಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ರಾವೂರ ಪ್ರಾಥಮಿಕ ಆರೋಗ್ಯ ಕೇಂದ್ರ ಭಾರತ ಸ್ವಾಭಿಮಾನ ಟ್ರಸ್ಟ್ ಹಾಗೂ ಪತಾಂಜಲಿ ಯೋಗ ಪೀಠದ ವತಿಯಿಂದ ಯೋಗ ದಿನ ಆಚರಿಸಲಾಯಿತು   

ರಾವೂರು(ವಾಡಿ): ಕೋವಿಡ್‌ ಕಾಲಘಟ್ಟದಲ್ಲಿ ನಮ್ಮ ಶರೀರ ಮತ್ತು ಮನಸ್ಸು ಸ್ವಸ್ಥವಾಗಿಡಲು, ಖಿನ್ನತೆ ದೂರ ಮಾಡಲು ಯೋಗ-ಧ್ಯಾನ ಬಹಳ ಮುಖ್ಯ. ಪ್ರತಿಯೊಬ್ಬರು ನಿತ್ಯ ಯೋಗ ಮಾಡುವುದರ ಮೂಲಕ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು ಎಂದು ಭಾರತ ಸ್ವಾಭಿಮಾನ ಟ್ರಸ್ಟಿನ ಜಿಲ್ಲಾ ಅಧ್ಯಕ್ಷ ಶಿವಾನಂದ ಸಾಲಿಮಠ ಹೇಳಿದರು.

ರಾವೂರ ಗ್ರಾಮದ ಶ್ರೀ ಸಿದ್ಧಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ರಾವುರ ಪ್ರಾಥಮಿಕ ಆರೋಗ್ಯ ಕೇಂದ್ರ ಭಾರತ ಸ್ವಾಭಿಮಾನ ಟ್ರಸ್ಟ್, ಪತಾಂಜಲಿ ಯೋಗ ಪೀಠದ ವತಿಯಿಂದ ಹಮ್ಮಿಕೊಂಡಿದ್ದ ‘ಯೋಗದಿಂದ ಆರೋಗ್ಯ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಯೋಗ ಶಿಕ್ಷಕ ವೀರಣ್ಣ ಯಾರಿ ಮಾತನಾಡಿದರು. ಕೊಂಚೂರು ಸವಿತಾಪೀಠದ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ, ಯೋಗ ಶಿಕ್ಷಕರಾದ ಮೋಹನ ಗಂಟಲಿ, ಶಿಕ್ಷಕರಾದ ಸಿದ್ಧಲಿಂಗ ಬಾಳಿ, ಶಿವಕುಮಾರ ಸರಡಗಿ, ಭೀಮಾಶಂಕರ ಬಮ್ಮನಳ್ಳಿ, ಸುಗುಣಾ ಕೋಳ್ಳೂರ, ಭುವನೇಶ್ವರಿ.ಎಂ , ರಾಧಾ ರಾಠೋಡ, ಮಂಜುಳಾ ಪಾಟೀಲ, ವಿಜಯಲಕ್ಷ್ಮಿ ಬಮ್ಮನಳ್ಳಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.