ADVERTISEMENT

ಕಲಬುರಗಿ: ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕ ಕುಸಿದುಬಿದ್ದು ಸಾವು

​ಪ್ರಜಾವಾಣಿ ವಾರ್ತೆ
Published 28 ಮೇ 2025, 4:38 IST
Last Updated 28 ಮೇ 2025, 4:38 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಕಲಬುರಗಿ: ತಾಲ್ಲೂಕಿನ ಹತಗುಂದಾ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ADVERTISEMENT

ಯಳವಂತಗಿ (ಕೆ) ಗ್ರಾಮದ ನಿವಾಸಿ ಸಚಿನ್ ಪರಮೇಶ್ವರ ಮಾನೆ (22) ಮೃತ ಯುವಕ. ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹತಗುಂದಾ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಸ್ನೇಹಿತರಾದ ಕಾರ್ತಿಕ್, ಅಭಿಷೇಕ್ ಅವರೊಂದಿಗೆ ಸಚಿನ್ ಡ್ಯಾನ್ಸ್ ಮಾಡುತ್ತಿದ್ದರು. ಏಕಾಏಕಿ ಕುಸಿದು ಬಿದ್ದು, ಜಿಮ್ಸ್‌ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.