ADVERTISEMENT

ಶಾಸಕ ಪ್ರಿಯಾಂಕ್‌ ಖರ್ಗೆಗೆ ಅವಹೇಳನ; ಯುವಕ ಬಂಧನ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 13:27 IST
Last Updated 4 ಜುಲೈ 2022, 13:27 IST
ಅಯ್ಯಪ್ಪ ಪವಾರ
ಅಯ್ಯಪ್ಪ ಪವಾರ   

ಚಿತ್ತಾಪುರ (ಕಲಬುರಗಿ ಜಿಲ್ಲೆ): ಸ್ಥಳೀಯ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ತಾಲ್ಲೂಕಿನ ರಾಮತೀರ್ಥ ಗ್ರಾಮದ ಅಯ್ಯಪ್ಪ ನರಸಿಂಗ ಪವಾರ (32) ಎಂಬಾತನನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಕಳೆದ ಜೂನ್ 12ರಂದು ಅಯ್ಯಪ್ಪ ಪವಾರ್ ತನ್ನದೇ ಬಂಜಾರಾ ಸಮಾಜದ ವ್ಯಕ್ತಿಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿದ ಸಂದರ್ಭದಲ್ಲಿ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಲ್ಲದೇ, ಮಹಿಳೆಯರ ಬಗ್ಗೆಯೂ ಅಶ್ಲೀಲವಾಗಿ ಮಾತನಾಡಿದ್ದಾನೆ ಎಂದು ಚಿತ್ತಾಪುರದ ನಿವಾಸಿ ಆನಂದ ಕಲ್ಲಕ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.

ಅಯ್ಯಪ್ಪ ಮೊಬೈಲ್‌ನಲ್ಲಿ ಮಾತನಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಹೀಗಾಗಿ, ಇದರಿಂದ ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇರುವುದರಿಂದ ಕ್ರಮ ಕೈಗೊಳ್ಳಬೇಕು ಎಂದು ಆನಂದ ಕಲ್ಲಕ್ ದೂರಿನಲ್ಲಿ ತಿಳಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.