ಕಮಲಾಪುರ (ಕಲಬುರ್ಗಿ ಜಿಲ್ಲೆ): ಪಟ್ಟಣದ ಬೆಳಕೋಟಾ ಕ್ರಾಸ್ ಬಳಿ ಸೋಮವಾರ ರಾತ್ರಿ ಎರಡು ಬೈಕ್‌ಗಳ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಮಂಗಳವಾರ ನಸುಕಿನ ಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹುಮನಾಬಾದ್ ತಾಲ್ಲೂಕಿನ ಜಲಸಂಗಿ ಗ್ರಾಮದ ಪ್ರಭಾಕರ ತಿಪ್ಪಣ್ಣ (28) ಮೃತ ವ್ಯಕ್ತಿ. ಇವರಿಗೆ ಬೈಕಿನಲ್ಲಿ ಡಿಕ್ಕಿ ಹೊಡೆದ ಮಾಲಗತ್ತಿ ಗ್ರಾಮದ ಆಸೀಫ್ ತೀವ್ರವಾಗಿ ಗಾಯಗೊಂಡಿದ್ದಾರೆ.
ಎಲ್ ಅಂಡ್ ಟಿ ಕಂಪನಿಯ ಕ್ಷೇತ್ರ ಅಧಿಕಾರಿಯಾಗಿದ್ದ ಪ್ರಭಾಕರ ಬೆಳಕೋಟಾ ಪುನರ್ವಸತಿ ಕೇಂದ್ರದಲ್ಲಿ ವಾಸವಾಗಿದ್ದರು. ಕಮಲಾಪುರ ಪಟ್ಟಣದಲ್ಲಿನ ಖಾನಾವಳಿಯಲ್ಲಿ ರಾತ್ರಿ ಊಟ ಮುಗಿಸಿಕೊಂಡು ಬೈಕ್ ಮೇಲೆ ಮನೆಗೆ ಮರಳುತ್ತಿದ್ದರು. ಬೆಳಕೋಟಾ ಕ್ರಾಸ್ ಬಳಿ ಬೈಕ್ ತಿರುಗಿಸಿದ್ದಾರೆ. ಈ ಸಂದರ್ಭ ಹಿಂದಿನಿಂದ ಬೈಕಿನಲ್ಲಿ ಬಂದ ಆಸೀಫ್ ಡಿಕ್ಕಿ ಹೊಡೆದಿದ್ದಾರೆ. ತೀವ್ರ ಗಾಯಗೊಂಡ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪ್ರಭಾಕರ ಅಸುನೀಗಿದರು.
ಪಿಎಸ್‌ಐ ಭೀಮರಾಯ ಪಾಟೀಲ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.