ADVERTISEMENT

ಪಕ್ಷ ಸಂಘಟನೆಯಲ್ಲಿ ಯುವಕರ ಪಾತ್ರ ಅಪಾರ: ಶಾಸಕ ಎಂ.ವೈ.ಪಾಟೀಲ

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 4:03 IST
Last Updated 25 ಜನವರಿ 2022, 4:03 IST
ಅಫಜಲಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಯುವ ಕಾಂಗ್ರೆಸ್ ನಗರ ಘಟಕದಿಂದ ಶಾಸಕ ಎಂ.ವೈ.ಪಾಟೀಲ್ ಅವರಿಗೆ ಸನ್ಮಾನ ಮಾಡಲಾಯಿತು.ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಅಂಬರೀಶ್ ಬರಲಿ, ನಗರಾಧ್ಯಕ್ಷ ಮಾಜೀದ ಪಟೇಲ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶರಣು ಕುಂಬಾರ ಇದ್ದರು.
ಅಫಜಲಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಯುವ ಕಾಂಗ್ರೆಸ್ ನಗರ ಘಟಕದಿಂದ ಶಾಸಕ ಎಂ.ವೈ.ಪಾಟೀಲ್ ಅವರಿಗೆ ಸನ್ಮಾನ ಮಾಡಲಾಯಿತು.ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಅಂಬರೀಶ್ ಬರಲಿ, ನಗರಾಧ್ಯಕ್ಷ ಮಾಜೀದ ಪಟೇಲ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶರಣು ಕುಂಬಾರ ಇದ್ದರು.   

ಅಫಜಲಪುರ: ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ. ಯುವಕರು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡಲು ಕಾಂಗ್ರೇಸ್ ಯುವ ಸಮಿತಿಯ ಸರ್ವ ಸದಸ್ಯರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಎಂ.ವೈ.ಪಾಟೀಲ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಯುವ ಕಾಂಗ್ರೆಸ್ ನಗರ ಘಟಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜೀದ ಲತೀಫ್ ಪಟೇಲ್ ಹಾಗೂ ಸದಸ್ಯರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷವು ಈ ದೇಶದ ಒಳಿತಿಗಾಗಿ ಸಾಕಷ್ಟು ಜನಪರ ಯೋಜನೆಗಳನ್ನು ತರುವ ಮೂಲಕ ಶ್ರಮಿಸಿದೆ. ಆದರೆ ಬಿಜೆಪಿ ಪಕ್ಷವು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ ಜನಪರ ಯೋಜನೆಗಳನ್ನು ರದ್ದುಗೊಳಿಸಿ ಎಲ್ಲವೂ ಖಾಸಗೀಕರಣ ಮಾಡುತ್ತಿದ್ದಾರೆ. ಈ ದೇಶ ಉಳಿಯಬೇಕಾದರೆ ದೇಶಕ್ಕೆ ಹಾಗೂ ರಾಜ್ಯಕ್ಕೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದು ಬಹಳ ಅವಶ್ಯಕತೆಯಿದೆ. ಇದಕ್ಕಾಗಿ ಯುವಕರು ಶ್ರಮಿಸಬೇಕು ಎಂದು ತಿಳಿಸಿದರು.

ADVERTISEMENT

ಯುವ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಮಾಜೀದ ಲತೀಫ್ ಪಟೇಲ್ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ ಮತ್ತೊಮ್ಮೆ ಜಯಭೇರಿ ಬಾರಿಸಲು ಬೂತ್ ಮಟ್ಟದಿಂದ ಪಕ್ಷವು ಸಂಘಟನೆ ಮಾಡಲಾಗುವುದು. ಶಾಸಕ ಎಂ.ವೈ.ಪಾಟೀಲ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು ಎಂದು ತಿಳಿಸಿದರು.

ಮುಖಂಡರಾದ ಚಂದು ದೇಸಾಯಿ, ಶಿವಾನಂದ ಗಾಡಿ ಸಾಹುಕಾರ, ಶರಣು ಕುಂಬಾರ, ಶಿವಲಿಂಗ ಗಾಯಕವಾಡ, ಸಂತೋಷ ಮನ್ಮಿ, ಪ್ರವೀಣ ಕಲ್ಲೂರ, ನಾಗರಾಜ ರಾಂಪೂರ, ಮಳೆಂದ್ರ ಡಾಂಗೆ, ಬಸವರಾಜ ಮನ್ಮಿ, ಸಿದ್ದು ವಿಟ್ಕರ್, ಭಾಗಣ್ಣ ಕಳಸಿ, ಅನಿಲ್ ಹೊಸಮನಿ, ಶಂಕರ್ ರಾಠೋಡ, ಶಿವು ಬಟಗೇರಿ,ನಿಕೇಶ ಅಂಬೂರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.