ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಚಿತ್ತಾಪುರ: ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ರೋಶನ್ ಖೀಮು ರಾಠೋಡ(18) ಎಂಬ ಯುವಕ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಜರುಗಿದೆ.
ಪಿಎಸ್ಐ ಶ್ರೀಶೈಲ್ ಅಂಬಾಟಿ ಅವರು ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
‘ನನ್ನ ಮಗನ ಸಾವಿನ ಬಗ್ಗೆ ಸಂಶಯವಿದೆ’ ಎಂದು ಮೃತ ರೋಶನ್ ಅವರ ತಂದೆ ಖೀಮು ರಾಠೋಡ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ಮೃತದೇಹದ ಪರೀಕ್ಷೆ ಮಾಡಿಸಿದ ಪೊಲೀಸರು, ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಿದ್ದಾರೆ. ತನಿಖೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.