ADVERTISEMENT

ಶೂನ್ಯ ಬಡ್ಡಿ ದರದ ಸಾಲ ಮಿತಿ ₹5 ಲಕ್ಷಕ್ಕೆ ಏರಿಕೆ: ಸಹಕಾರ ಸಚಿವ ಕೆ.ಎನ್‌. ರಾಜಣ್ಣ

​ಪ್ರಜಾವಾಣಿ ವಾರ್ತೆ
Published 18 ಜುಲೈ 2023, 16:04 IST
Last Updated 18 ಜುಲೈ 2023, 16:04 IST
ಬಿ.ಜಿ. ಪಾಟೀಲ
ಬಿ.ಜಿ. ಪಾಟೀಲ   

ಕಲಬುರಗಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳ ಮೂಲಕ ರೈತರಿಗೆ ಶುನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲದ ಮಿತಿಯನ್ನು 2023–24 ಆಯವ್ಯಯದಲ್ಲಿ ₹3 ಲಕ್ಷದಿಂದ ₹5 ಲಕ್ಷಕ್ಕೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲದ ಮೊತ್ತವನ್ನು ₹10 ಲಕ್ಷದಿಂದ ₹15 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಬಿ.ಜಿ.ಪಾಟೀಲ ಅವರು ಕೇಳಿದ ಚುಕ್ಕೆ ಗುರುತ್ತಿಲ್ಲದ ಪ್ರಶ್ನೆಗೆ (ಪ್ರಶ್ನೆ ಸಂಖ್ಯೆ 531) ಲಿಖಿತವಾಗಿ ಸಚಿವರು ಈ ಉತ್ತರ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT